Monday, May 6, 2024
spot_imgspot_img
spot_imgspot_img

ಸೋಶಿಯಲ್‌ ಮೀಡಿಯಾದಲ್ಲಿ ಖಾಸಗಿ ವಿಡಿಯೊ ವೈರಲ್; ಮನನೊಂದು ವಿದ್ಯಾರ್ಥಿಗಳು ಆತ್ಮಹತ್ಯೆಗೆ ಶರಣು

- Advertisement -G L Acharya panikkar
- Advertisement -

ಸೋಶಿಯಲ್‌ ಮೀಡಿಯಾದಲ್ಲಿ ಖಾಸಗಿ ವಿಡಿಯೊ ವೈರಲ್ ನಿಂದ ಮನನೊಂದು ವಿದ್ಯಾರ್ಥಿಗಳು ಆತ್ಮಹತ್ಯೆಗೆ ಶರಣಾದ ಘಟನೆ ದಾವಣಗೆರೆಯಲ್ಲಿ ನಡೆದಿದೆ.

ನಗರದ ಪದವಿ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿಗಳಿಬ್ಬರು ಮಹಡಿ ಮೇಲೆ ಏಕಾಂತದಲ್ಲಿ ಇರುವ ವಿಡಿಯೊ ವೈರಲ್ ಆಗಿತ್ತು. ಖಾಸಗಿ ವಿಡಿಯೊ ವೈರಲ್ ಆಗುತ್ತಿದ್ದಂತೆ ಮನನೊಂದು ವಿದ್ಯಾರ್ಥಿನಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಬಳಿಕ ವಿದ್ಯಾರ್ಥಿ ರತನ್ (20) ರಾತ್ರಿ ಹಾಸ್ಟೆಲ್‌ ಸಮೀಪದಲ್ಲಿದ್ದ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಇಬ್ಬರು ಬಿ.ಕಾಂ ದ್ವಿತೀಯ ವರ್ಷದಲ್ಲಿ ವ್ಯಾಸಂಗ ಮಾಡುತ್ತಿದ್ದರು ಎಂದು ತಿಳಿದು ಬಂದಿದೆ. ಸದ್ಯ ಮಕ್ಕಳನ್ನು ಕಳೆದುಕೊಂಡ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ. ಮಕ್ಕಳ ವಿಡಿಯೊ ವೈರಲ್‌ ಮಾಡಿದವರ ವಿರುದ್ಧ ಪೋಷಕರು ಪ್ರತ್ಯೇಕ ದೂರು ದಾಖಲು ಮಾಡಿದ್ದಾರೆ.

Insta: glacharyajewellers
Fb: glacharya

- Advertisement -

Related news

error: Content is protected !!