Sunday, May 5, 2024
spot_imgspot_img
spot_imgspot_img

ಪಾಕಿಸ್ತಾನ್ ಪರ ಘೋಷಣೆ ಪ್ರಕರಣ: ಮೂವರು ಆರೋಪಿಗಳ ಬಂಧನ

- Advertisement -G L Acharya panikkar
- Advertisement -

ಕಾಂಗ್ರೆಸ್ ರಾಜ್ಯಸಭಾ ಸದಸ್ಯ ನಾಸೀರ್ ಹುಸೇನ್ ಅವರ ಸಂಭ್ರಮಾಚರಣೆಯಲ್ಲಿ ಪಾಕಿಸ್ತಾನ್ ಪರ ಘೋಷಣೆ ಕೂಗಿದ್ದಾರೆ ಅನ್ನೋ ಪ್ರಕರಣಕ್ಕೆ ರೋಚಕ ತಿರುವು ಸಿಕ್ಕಿದೆ. ವಿಧಾನಸೌಧ ಪೊಲೀಸರು ಈ ಆರೋಪಕ್ಕೆ ಸಂಬಂಧಪಟ್ಟಂತೆ ಮೂವರು ಆರೋಪಿಗಳನ್ನ ಬಂಧಿಸಿದ್ದಾರೆ.

ವಿಧಾನಸೌಧ ಪೊಲೀಸ್ರಿಂದ ಮೂವರು ಆರೋಪಿಗಳನ್ನ ಬಂಧಿಸಲಾಗಿದ್ದು, ಅಶೋಕನಗರ ಪೊಲೀಸ್ ಠಾಣೆಯಲ್ಲಿ ವಿಚಾರಣೆ ನಡೆಸಲಾಗಿದೆ. 2ನೇ FSL ವರದಿ ಆಧರಿಸಿ ಆರೋಪಿಗಳನ್ನು ಬಂಧಿಸಲಾಗಿದೆ.
ಪೊಲೀಸರು ಬಂಧಿಸಿರುವ ಮೂವರು ಆರೋಪಿಗಳನ್ನು ಇಲ್ತಾಜ್, ಮುನಾವರ್ ಹಾಗೂ ಮೊಹಮದ್ ಶಫೊ ನಾಶಿ ಪುಡಿ ಎಂದು ಗುರುತಿಸಲಾಗಿದೆ. ಇಲ್ತಾಜ್‌ ದೆಹಲಿ ಮೂಲದವರು, ಮುನಾವರ್‌ ಆರ್‌.ಟಿ ನಗರದವರು ಹಾಗೂ ಬ್ಯಾಡಗಿಯ ಮೊಹಮದ್ ಶಫಿ ನಾಶಿ ಪುಡಿ ಅವರನ್ನು ಬಂಧಿಸಿಲಾಗಿದೆ. ಮೂವರು ಆರೋಪಿಗಳನ್ನು ಬೌರಿಂಗ್ ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು, ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದೆ.

- Advertisement -

Related news

error: Content is protected !!