Sunday, July 19, 2026
spot_imgspot_img
spot_imgspot_img

ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿ ಅಬ್ದುಲ್ ರವೂಫ್ @ ಮೀಸೆ ರವೂಫ್ ಬಂಧನ -ಮಂಗಳೂರು ನಗರ ಪೊಲೀಸ್ ಕಾರ್ಯಾಚರಣೆ

- Advertisement -
- Advertisement -

ಮಂಗಳೂರು: ಮಾನ್ಯ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿ ಅಬ್ದುಲ್ ರವೂಫ್ @ ಮೀಸೆ ರವೂಫ್ (48) ಎಂಬಾತನನ್ನು ಮಂಗಳೂರು ನಗರ ಪೊಲೀಸರು ಬಂಧಿಸಿದ್ದಾರೆ.ಮಂಗಳೂರು: ಮಾನ್ಯ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿ ಅಬ್ದುಲ್ ರವೂಫ್ @ ಮೀಸೆ ರವೂಫ್ (48) ಎಂಬಾತನನ್ನು ಮಂಗಳೂರು ನಗರ ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿ ಅಬ್ದುಲ್ ರವೂಫ್ @ ಮೀಸೆ ರವೂಫ್, ಕೇರಳದ ಕಾಸರಗೋಡು ಜಿಲ್ಲೆಯ ಉಪ್ಪಳ ನಿವಾಸಿ. ಅಂತರರಾಜ್ಯ ನೋಟೋರಿಯಸ್ ಅಪರಾಧಿಯಾಗಿದ್ದು, ಕೇರಳ ರಾಜ್ಯದ ಉಪ್ಪಳ–ಪೈವಳಿಕೆ ಪ್ರದೇಶದ ಇಸುಬು ಜಿಯಾದ್ @ ಜಿಯಾ ಎಂಬಾತನ ಸಹಚರನಾಗಿದ್ದನು ಎಂದು ಪೊಲೀಸರು ತಿಳಿಸಿದ್ದಾರೆ.

ಈತನ ವಿರುದ್ಧ ಕೇರಳದ ಕಾಸರಗೋಡು ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ಸುಮಾರು 19 ಪ್ರಕರಣಗಳು, ಮಂಗಳೂರು ನಗರದ ಕಾವೂರು ಪೊಲೀಸ್ ಠಾಣೆಯಲ್ಲಿ 1 ಪ್ರಕರಣ ಹಾಗೂ ಕೋಣಾಜೆ ಪೊಲೀಸ್ ಠಾಣೆಯಲ್ಲಿ 5 ಪ್ರಕರಣಗಳು ಸೇರಿ ಒಟ್ಟು 25 ಪ್ರಕರಣಗಳು ದಾಖಲಾಗಿವೆ.

ಕಾವೂರು ಪೊಲೀಸ್ ಠಾಣೆಯ ಪ್ರಕರಣದಲ್ಲಿ ಮಾನ್ಯ ನ್ಯಾಯಾಲಯವು ದಸ್ತಗಿರಿ ವಾರಂಟ್ ಹೊರಡಿಸಿತ್ತು. ಅಲ್ಲದೆ, ಕೋಣಾಜೆ ಪೊಲೀಸ್ ಠಾಣೆಯ ಐದು ಪ್ರಕರಣಗಳಲ್ಲಿ ನ್ಯಾಯಾಲಯವು ಆರೋಪಿಯನ್ನು ಉದ್ಘೋಷಿತ ಅಪರಾಧಿ (Proclaimed Offender) ಎಂದು ಘೋಷಿಸಿತ್ತು. ಮಂಜೇಶ್ವರ ಪೊಲೀಸ್ ಠಾಣೆಯ ಮತ್ತೊಂದು ಪ್ರಕರಣದಲ್ಲಿಯೂ ದಸ್ತಗಿರಿ ವಾರಂಟ್ ಜಾರಿಯಾಗಿತ್ತು. ದರೋಡೆ, ಮನೆಮೇಲು ಕಳ್ಳತನ, ಶಸ್ತ್ರಾಸ್ತ್ರ ಕಾಯ್ದೆ ಉಲ್ಲಂಘನೆ, ಶಸ್ತ್ರಾಸ್ತ್ರ ಕಾಯ್ದೆ, ಸಾರ್ವಜನಿಕ ಆಸ್ತಿ ಹಾನಿ ತಡೆ ಕಾಯ್ದೆ, ಕ್ರಿಮಿನಲ್ ಪ್ರೊಸೀಜರ್ ಕೋಡ್ ಅಡಿಯಲ್ಲಿ ಪ್ರಕರಣಗಳು ಭಾರತೀಯ ದಂಡ ಸಂಹಿತೆಯ ಕಲಂಗಳು 398, 392, 395, 457, 380, 452, 324, 308, 506 ಸೇರಿದಂತೆ ಹಲವು ಗಂಭೀರ ಪ್ರಕರಣಗಳು ಈತನ ಮೇಲಿದೆ.

ಉತ್ತರ ಉಪವಿಭಾಗದ ಸಹಾಯಕ ಪೊಲೀಸ್ ಆಯುಕ್ತರಾದ ಶ್ರೀ ಶ್ರೀಕಾಂತ ಕೆ. ಅವರ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿದ ತಂಡದಲ್ಲಿ ಎಎಸ್‌ಐ ಚಂದ್ರಶೇಖರ್, ಸಿಬ್ಬಂದಿಗಳಾದ ಹೆಚ್.ಸಿ. ರೆಜಿ ವಿ.ಎಂ., ದಾಮೋದರ ಕೆ. ಹಾಗೂ ಹಾಲೇಶ್ ನಾಯ್ಕ್ ಅವರು ಭಾಗವಹಿಸಿದ್ದರು. ಆರೋಪಿಯನ್ನು ಡಿ.16ರಂದು ವಶಕ್ಕೆ ಪಡೆದು ಮುಂದಿನ ಕಾನೂನು ಕ್ರಮಕ್ಕಾಗಿ ಕಾವೂರು ಪೊಲೀಸ್ ಠಾಣೆಗೆ ಹಸ್ತಾಂತರಿಸಲಾಗಿದೆ.

- Advertisement -

Related news

error: Content is protected !!