Saturday, October 24, 2026
spot_imgspot_img
spot_imgspot_img

ಡ್ರಾಯಿಂಗ್ ಗ್ರೇಡ್ ಪರೀಕ್ಷೆಯಲ್ಲಿ ಬಾಲವಿಕಾಸ ಶಾಲೆಯ ವಿದ್ಯಾರ್ಥಿಗಳ ಸಾಧನೆ

- Advertisement -
- Advertisement -

ವಿಟ್ಲ:ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಮಲ್ಲೇಶ್ವರಂ, ಬೆಂಗಳೂರು ಆಯೋಜಿಸಿದ ಡ್ರಾಯಿಂಗ್ ಗ್ರೇಡ್ ಪರೀಕ್ಷೆಯು ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆ ತೆಂಕಿಲ,ಪುತ್ತೂರು ಇಲ್ಲಿ ನವೆಂಬರ್ 21, 22,ಮತ್ತು 23 ರಂದು ನಡೆದಿದ್ದು, ಮಾಣಿ ಪೆರಾಜೆಯ ವಿದ್ಯಾನಗರದ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯ ಒಟ್ಟು 45 ವಿದ್ಯಾರ್ಥಿಗಳು ಭಾಗವಹಿಸಿದ್ದು,ಶೇ 100 ಫಲಿತಾಂಶ ಲಭಿಸಿದೆ. ಲೋವರ್ ಗ್ರೇಡ್ ವಿಭಾಗದಲ್ಲಿ 12 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು‌, 4 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ ಹಾಗೂ 8 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದಾರೆ.ಹೈಯರ್ ಗ್ರೇಡ್ ವಿಭಾಗದಲ್ಲಿ 33 ವಿದ್ಯಾರ್ಥಿಗಳು ಭಾಗವಹಿಸಿದ್ದು,15 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ,17 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಹಾಗೂ ಒಬ್ಬ ವಿದ್ಯಾರ್ಥಿ ದ್ವಿತೀಯ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ವಿದ್ಯಾರ್ಥಿಗಳಿಗೆ ಶಾಲೆಯ ಚಿತ್ರಕಲಾ ಶಿಕ್ಷಕರಾದ ಅರುಣ್ ಕುಮಾರ್ ಹಾಗೂ ಕಾರ್ತಿಕ್ ಕುಮಾರ್ ರವರು ತರಬೇತಿ ನೀಡಿರುತ್ತಾರೆ.

- Advertisement -

Related news

error: Content is protected !!