

ಮಕ್ಕಳಲ್ಲಿ ಅಡಗಿರುವ ಪ್ರತಿಭೆಗಳನ್ನು ಬೆಳಗಲು ಪೂರಕವಾದ ಶಿಕ್ಷಣ ವಸತಿ ಶಾಲೆಯಲ್ಲಿ ದೊರೆಯುತ್ತಿರುವುದರಿಂದ ಸಂಕುಚಿತ ಮನೋಭಾವನೆ ಹೋಗಲಾಡಿಸಲು ಉತ್ತಮ ವೇದಿಕೆಯಾಗಿದೆ ಎಂದು ಮಹರ್ಷಿ ವಾಲ್ಮೀಕಿ ವಾಲ್ಮೀಕಿ ಆದಿವಾಸಿ ಬುಡಕಟ್ಟು ವಸತಿ ಶಾಲೆ, ಕಡೇಶಿವಾಲಯದ ಪ್ರತಿಭಾ ಪುರಸ್ಕಾರ ಮತ್ತು ಶಾಲಾ ವಾರ್ಷಿಕೋತ್ಸವದ ಮುಖ್ಯ ಅತಿಥಿಯಾಗಿ ಭಾಗವಹಿಸಿದ ಕಡೇಶಿವಾಲಯ ಸರಕಾರಿ ಪ್ರೌಢಶಾಲೆಯ ಮುಖ್ಯೋಪಾಧ್ಯಾಯರಾದ ಲೋಕಾನಂದ ಎನ್. ಸಮಾರಂಭವನ್ನು ಉದ್ದೇಶಿಸಿ ಮಾತನಾಡಿದರು.
ಅಧ್ಯಯನದ ಜೊತೆಗೆ ಸಾಂಸ್ಕೃತಿಕವಾಗಿ ಬೆಳೆಯುವಂತಾಗಬೇಕು. ಪಠ್ಯೇತರ ಚಟುವಟಿಕೆಗಳಿಂದ ಜ್ಞಾನ ಮತ್ತು ನಾಯಕತ್ವ ಗುಣ ಬೆಳೆಯುತ್ತದೆ ಎಂದು ಕಡೇಶಿವಾಲಯ ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಸುರೇಶ ಕೆ. ದೀಪ ಬೆಳಗಿಸಿ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಮಕ್ಕಳ ಶಿಕ್ಷಣದಲ್ಲಿ ಪೋಷಕರ ಸಹಕಾರ ಅಗತ್ಯವೆಂದು ಸುರೇಖಾ ಯಾಳವಾರ ವಿಶೇಷ ಸಂಪನ್ಮೂಲ ಅಧಿಕಾರಿ, ಕ್ಷೇತ್ರ ಸಂಪನ್ಮೂಲ ಕೇಂದ್ರ ಬಂಟ್ವಾಳ ತಿಳಿಸಿದರು. ವಸತಿ ಶಾಲಾ ಮೇಲ್ವಿಚಾರಕಿ ಭವ್ಯ ಪಿ. ಸ್ವಾಗತಿಸಿ, ಶಿಕ್ಷಕಿ ವನಿತಾ ಯಂ. ವಂದಿಸಿದರು. ಶಿಕ್ಷಕಿಯರಾದ ಧನಲಕ್ಷ್ಮೀ ಕೆ., ಶ್ವೇತಾ ಸಾಂಸ್ಕೃತಿಕ ಕಾರ್ಯಕ್ರಮ, ವಿದ್ಯಾಕುಮಾರಿ ಎ. ಸಭಾ ಕಾರ್ಯಕ್ರಮ ನಿರೂಪಿಸಿದರು. ಶಿಕ್ಷಕಿ ಜಯಲಕ್ಷ್ಮೀ ಡಿ. ಬಹುಮಾನ ವಿಜೇತರ ಪಟ್ಟಿ ವಾಚಿಸಿದರು. ಶಾಲಾ ಶಿಕ್ಷಕಿ ಯಶೋದ ಎಸ್. ಶೈಕ್ಷಣಿಕ ವರ್ಷದ ವರದಿಯನ್ನು ವಾಚಿಸಿದರು. ಬೋಧಕೇತರ ಸಿಬ್ಬಂದಿಗಳಾದ ಸವಿತ, ಶೈಲಜಾ ಬಿ., ಶಾರದಾ, ಉಷಾ ಟಿ., ದೇವಕಿ, ಪ್ರೀತಿ ಯಂ. ಸಹಕರಿಸಿದರು. ಸಭಾ ಕಾರ್ಯಕ್ರಮದ ಬಳಿಕ ಮಕ್ಕಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಜರಗಿದವು.








