





ವಿಟ್ಲ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ( ರಿ) ಧರ್ಮಸ್ಥಳ ಧರ್ಮಾಧಿಕಾರಿಗಳಾದ ಪರಮಪೂಜ್ಯ ರಾಜಶ್ರೀ ಡಾ ಡಿ.ವೀರೇಂದ್ರ ಹೆಗ್ಗಡೆಯವರ ಮತ್ತು ಮಾತೃಶ್ರೀ ಡಾ ಹೇಮಾವತಿ ಡಿ ಹೆಗ್ಗಡೆಯವರ ಶುಭಾಶೀರ್ವಾದಗಳೊಂದಿಗೆ ಮಹಿಳಾ ಜ್ಞಾನವಿಕಾಸ ಕಾರ್ಯಕ್ರಮದಡಿಯಲ್ಲಿ ನಡೆಯುವ ತಾಲೂಕು ಮಟ್ಟದ ಮಹಿಳಾ ವಿಚಾರಗೋಷ್ಠಿ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ ಡಿ.25 ರಂದು ಬೆಳಿಗ್ಗೆ 9:30 ಕ್ಕೆ ವಿಟ್ಲ ವಿಠಲ ಪದವಿಪೂರ್ವ ಕಾಲೇಜು ಸುವರ್ಣ ರಂಗಮಂದಿರದಲ್ಲಿ ನಡೆಯಲಿದೆ.ಕಾರ್ಯಕ್ರಮದ ಉದ್ಘಾಟಕರಾಗಿ ವಿಟ್ಲ ಪೊಲೀಸ್ ಠಾಣೆಯ ಪಿ ಎಸ್ ಐ ಕಾನೂನು ಮತ್ತು ಸುವ್ಯವಸ್ಥೆ ವಿಭಾಗ ವಿದ್ಯಾ ಎ.ಜೆ, ಅಧ್ಯಕ್ಷರಾಗಿ ಪ್ರಗತಿಬಂಧು ಸ್ವಸಹಾಯ ಸಂಘದ ಒಕ್ಕೂಟ ವಲಯದ ವಲಯಾಧ್ಯಕ್ಷ ಪ್ರಮೀಳಾ,ಮುಖ್ಯ ಅತಿಥಿಯಾಗಿ ವಿಟ್ಲ ಪಟ್ಟಣ ಪಂಚಾಯಿತ್ ಉಪಾಧ್ಯಕ್ಷ ಸಂಗೀತಾ ಪಾಣೆಮಜಲು, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ಮಾನ್ಯ ಜಿಲ್ಲಾ ನಿರ್ದೇಶಕರ ಪ್ರವೀಣ್ ಕುಮಾರ್, ವಿಠಲ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಆದರ್ಶ ಚೊಕ್ಕಾಡಿ,ಸಮುದಾಯ ಆರೋಗ್ಯ ಕೇಂದ್ರ ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಕುಸುಮ,ಪ್ರಗತಿಬಂಧು ಸ್ವಸಹಾಯ ಸಂಘದ ಕೇಂದ್ರದ ಅಧ್ಯಕ್ಷ ನವೀನ್ ಚಂದ್ರ ಗೌರವ ಉಪಸ್ಥಿತಿಯಲ್ಲಿ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ವಿಟ್ಲ ವಲಯದ ಅಧ್ಯಕ್ಷ ಕೃಷ್ಣಪ್ಪ ಬಲ್ಲಾಳ್, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ವಿಟ್ಲ ವಲಯದ ಸದಸ್ಯ ನಟೇಶ್,ಪ್ರಗತಿಬಂಧು ಸ್ವಸಹಾಯ ಸಂಘದ ಅಧ್ಯಕ್ಷ ವಿಶ್ವನಾಥ ಉಪಸ್ಥಿತಿರುವವರು.ಬೆಳಿಗ್ಗೆ 11:30 ರಿಂದ ಮಹಿಳಾ ವಿಚಾರಗೋಷ್ಠಿಯಲ್ಲಿ ಪುತ್ತೂರು ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ಆಶಾ ಬೆಳ್ಳಾರೆ ಸಂಪನ್ಮೂಲ ವ್ಯಕ್ತಿ ಭಾಗವಹಿಸಲಿದರೆ.