Sunday, September 6, 2026
spot_imgspot_img
spot_imgspot_img

ಚಿಕ್ಕಮಗಳೂರು: ಗೋವಿನ ಬಾಲಕ್ಕೆ ಬೆಂಕಿ ಹಚ್ಚಿ ವಿಕೃತಿ ಮೆರೆದ ಘಟನೆ: ಹಿಂದೂ ಪರ ಸಂಘಟನೆಗಳಿಂದ ಪ್ರತಿಭಟನೆ

- Advertisement -
- Advertisement -

ಚಿಕ್ಕಮಗಳೂರು: ಗೋವಿನ ಬಾಲಕ್ಕೆ ಬೆಂಕಿ ಹಚ್ಚಿ ವಿಕೃತಿ ಮೆರೆದ ಘಟನೆಯನ್ನು ಖಂಡಿಸಿ ಹಿಂದೂ ಪರ ಸಂಘಟನೆಗಳು ‘ಗೋ ಮಾತೆ’ ರಕ್ಷಣೆಗೆ ಆಗ್ರಹಿಸಿ ಬೃಹತ್ ಪ್ರತಿಭಟನೆ ನಡೆಸಿವೆ.

ಚಿಕ್ಕಮಗಳೂರಿನ ಹನುಮಂತಪ್ಪ ವೃತ್ತದಲ್ಲಿ ಗೋವಿಗೆ ಪೂಜೆ ಸಲ್ಲಿಸುವ ಮೂಲಕ ಸಂಸದ ಕೋಟ ಶ್ರೀನಿವಾಸ ಪೂಜಾರಿ, ಎಮ್‌ಎಲ್‌ಸಿ ಸಿ.ಟಿ. ರವಿ, ಎಂ.ಕೆ. ಪ್ರಾಣೇಶ್ ಮೊದಲಾದವರು ಪ್ರತಿಭಟನೆಗೆ ಚಾಲನೆ ನೀಡಿದರು.ನಗರದ ಕತ್ರಿಮಾರಮ್ಮ ದೇವಾಲಯದಿಂದ ಮೆರವಣಿಗೆ ಆರಂಭ ಮಾಡಲಾಗಿದ್ದು, ಎಂ.ಜಿ. ರಸ್ತೆ ಮೂಲಕ ಆಜಾದ್ ಪಾರ್ಕ್ ವರೆಗೂ ಮೆರವಣಿಗೆ ಸಾಗಿದೆ. ಗೋಕಳ್ಳರನ್ನು, ಗೋವಿನ ಬಾಲಕ್ಕೆ ಬೆಂಕಿ ಹಚ್ಚಿದ ದುರುಳರನ್ನು ಗಡೀಪಾರು ಮಾಡುವಂತೆ ಆಗ್ರಹಿಸಿ ಈ ಪ್ರತಿಭಟನೆ ನಡೆದಿದೆ.

- Advertisement -

Related news

error: Content is protected !!