Friday, April 19, 2024
spot_imgspot_img
spot_imgspot_img

ರಾಜ್ಯದಲ್ಲಿ ಗೋ ಹತ್ಯೆ ನಿಷೇಧ ಮಸೂದೆಗೆ ಅಂಗೀಕಾರ!!!

- Advertisement -G L Acharya panikkar
- Advertisement -

ಬೆಂಗಳೂರು : ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಈ ಬಾರಿಯ ಸದನದಲ್ಲಿ ಗೋ ಹತ್ಯೆ ನಿಷೇಧ ವಿಧೇಯಕ ಮಂಡಿಸುವುದಾಗಿ ತಿಳಿಸಿದ್ದರು. ಅದರಂತೆಯೇ ಇಂದು ವಿಧಾನಸಭೆಯಲ್ಲಿ ಪಶುಸಂಗೋಪನಾ ಸಚಿವ ಪ್ರಭು ಚೌವ್ಹಾನ್ ಮಂಡಿಸಿದ್ದಾರೆ. ಇಂತಹ ಮಸೂದೆ ಮಂಡನೆಗೆ ಪ್ರತಿಪಕ್ಷಗಳಾದಂತ ಕಾಂಗ್ರೆಸ್ ಹಾಗೂ ಜೆಡಿಎಸ್ ಸದಸ್ಯರು ತೀವ್ರ ವಿರೋಧ ವ್ಯಕ್ತ ಪಡಿಸಿದ್ದವು. ಇದರ ಮಧ್ಯೆಯೂ ವಿಧಾನಸಭೆಯಲ್ಲಿ ಗೋ ಹತ್ಯೆ ನಿಷೇಧ ಮಸೂದೆ ಅಂಗೀಕಾರಗೊಂಡಿದೆ.


ಇಂದು ರಾಜ್ಯ ವಿಧಾನಸಭೆಯಲ್ಲಿ ಕೊನೆಗೂ ಪ್ರಾಣಿಗಳ ಹತ್ಯೆ ಹೆಸರಿನಲ್ಲಿ ನಿಷೇಧ ಹೇರುವ ಹೆಸರಿನಲ್ಲಿ ಗೋ ಹತ್ಯೆ ನಿಷೇಧ ವಿಧೇಯಕ ಮಂಡಿಸಲ್ಪಟ್ಟಿದೆ. ಪಶು ಸಂಗೋಪಾನಾ ಸಚಿಪ ಪ್ರಭು ಚೌವ್ಹಾಣ್ ಅವರು ಸದನದಲ್ಲಿ ಮಂಡಿಸಿದರು.

ಏಕಾಏಕಿ ಈ ಮಸೂದೆ ಮಂಡನೆಗೆ ಮುಂದಾದ ಸರ್ಕಾರದ ನಡೆಗೆ ವಿರೋಧ ಪಕ್ಷಗಳು ತೀವ್ರ ಅಸಮಾಧಾನ ಹೊರಹಾಕಿದರು. ಗೋ ಹತ್ಯೆ ನಿಷೇಧ ಮಸೂದೆ ಬಗ್ಗೆ ವಿಪಕ್ಷ ಸದಸ್ಯರ ಚರ್ಚೆಯಿಲ್ಲದೆ ಬರೀ ಆಡಳಿತ ಪಕ್ಷದ ಸದಸ್ಯರು ಮಾತ್ರ ಚರ್ಚೆ ಮಾಡಿ ವಿಧೇಯಕ ಅಂಗೀಕಾರಗೊಂಡಿತು.

ಗೋ ಹತ್ಯೆ ನಿಷೇಧ ವಿಧೇಯಕದಲ್ಲಿ ಏನೇನಿದೆ?

ಹಸು, ಕರು, ಎಮ್ಮೆ, ಎತ್ತು ಹಾಗೂ 13 ವರ್ಷ ಕೆಳಗಿನ ಕೋಣ ಹತ್ಯೆ ನಿಷೇಧ

ತಪ್ಪಿತಸ್ಥರಿಗೆ 3 ರಿಂದ 7 ವರ್ಷದವರೆಗೆ ಜೈಲು ಶಿಕ್ಷೆ

ಪ್ರತಿ ಗೋ ಹತ್ಯೆಗೆ 50,000 ದಿಂದ ಗರಿಷ್ಠ ಐದು ಲಕ್ಷ  ರೂ.ವರೆಗೆ ದಂಡ

ಪುನರಾವರ್ತಿತ ಅಪರಾಧಕ್ಕೆ 1 ಲಕ್ಷದಿಂದ 10 ಲಕ್ಷದವರೆಗೆ ದಂಡ ಹಾಗೂ ಏಳು ವರ್ಷ ಜೈಲು ಶಿಕ್ಷೆ

ಗೋ ಹತ್ಯೆ ಉದ್ದೇಶಕ್ಕಾಗಿ ಅಂತರಾಜ್ಯ ಹಾಗೂ ರಾಜ್ಯದೊಳಗಡೆ ಗೋ ಸಾಗಾಟ ನಿಷೇಧ

ಕೃಷಿ ಹಾಗೂ ಪಶುಸಂಗೋಪನೆ ಉದ್ದೇಶಕ್ಕಾಗಿ ಗೋ ಸಾಗಾಟಕ್ಕೆ ಅಧಿಕಾರಿಗಳ ಅನುಮತಿ ಅಗತ್ಯ

ಕೇಂದ್ರ ಸರ್ಕಾರದ ನಿಯಮಗಳ ಪ್ರಕಾರ ಸಾಗಾಟ ಮಾಡಬೇಕು

ನಿಯಮ ಉಲ್ಲಂಘನೆ ಮಾಡಿದರೆ ಮೂರು ವರ್ಷದಿಂದ ಐದು ವರ್ಷದವರೆಗೆ ಜೈಲು ಶಿಕ್ಷೆ ಹಾಗೂ ಐವತ್ತು ರೂ. ಸಾವಿರ ದಂಡ

ಎಸ್ ಐ ಶ್ರೇಣಿ ಹಾಗೂ ಅದಕ್ಕಿಂತ ಮೇಲ್ಪಟ್ಟ ಅಧಿಕಾರಿಗಳು ತಪಾಸಣೆ ಹಾಗೂ ಮುಟ್ಟುಗೋಲು ಮಾಡಲು ಕಾಯ್ದೆಯಲ್ಲಿ ಅಧಿಕಾರ

ಮುಟ್ಟುಗೋಲು ಹಾಕಿದ ಕೂಡಲೇ ಸಂಬಂಧಿತ ಉಪವಿಭಾಗೀಯ ಮ್ಯಾಜಿಸ್ಟ್ರೇಟ್ ಗೆ ವರದಿ ಮಾಡಬೇಕು

ಗೋ ಹತ್ಯೆಗೆ ಸಂಬಂಧಿಸಿದಂತೆ ಸಾಗಾಟ ಮಾಡಿದ ವಾಹನಗಳು ಹಾಗೂ ಇತರ ಸಲಕರಣೆಗಳನ್ನು ಆರೋಪಿಗೆ ಹಿಂದುರಿಗಿಸಲು ಬ್ಯಾಂಕ್ ಗ್ಯಾರಂಟಿ ನೀಡಬೇಕು

ಗೋಹತ್ಯೆ ಪ್ರಕರಣಗಳ ವಿಚಾರಣೆಗಾಗಿ ವಿಶೇಷ ನ್ಯಾಯಾಲಯ ರಚನೆಗೆ ಅಧಿಕಾರ

ಸಂಶೋಧನಾ ಉದ್ದೇಶಕ್ಕಾಗಿ ಬಳಸುವ ಗೋವುಗಳಿಗೆ ವಿನಾಯಿತಿ

ಪಶು ವೈದ್ಯಾಧಿಕಾರಿ ದೃಢೀಕರಿಸಿದ ಗೋ ಹತ್ಯೆ ಮಾಡಲು ಅವಕಾಶ

ಯಾವುದೇ ರೋಗಗಳಿಂದ ಬಳಲುತ್ತಿರುವ ಗೋವುಗಳ ಹತ್ಯೆಗೆ ಅವಕಾಶ.

- Advertisement -

Related news

error: Content is protected !!