Thursday, May 2, 2024
spot_imgspot_img
spot_imgspot_img

ಗ್ರಾ.ಪಂ ಚುನಾವಣೆ ಹಿನ್ನಲೆ : ಜು.21ರ ಸಂಜೆಯಿಂದ ಈ ಪ್ರದೇಶಗಳಲ್ಲಿ ಮದ್ಯ ಮಾರಾಟ ನಿಷೇಧ

- Advertisement -G L Acharya panikkar
- Advertisement -

ಮಂಗಳೂರು: ಜು.23 ರಂದು ಪುತ್ತೂರು ತಾಲೂಕಿನ ನಿಡ್ಪಳ್ಳಿ, ಆರ್ಯಪ್ಪು, ಬಂಟ್ವಾಳ ತಾಲೂಕಿನ ಪುದು ಹಾಗೂ ಬೆಳ್ತಂಗಡಿ ತಾಲೂಕಿನ ಉಜಿರೆ ಹಾಗೂ ಮಡಂತ್ಯಾರು ಗ್ರಾಮ ಪಂಚಾಯತ್‍ಗಳ ಚುನಾವಣೆ /ಉಪಚುನಾವಣೆಗೆ ಮತದಾನ ನಡೆಯಲಿದ್ದು, ಈ ಹಿನ್ನಲೆಯಲ್ಲಿ ಜು.21ರ ಸಂಜೆ 5 ಗಂಟೆಯಿಂದ ಚುನಾವಣೆ ಮುಕ್ತಾಯವಾಗುವವರೆಗೆ 3 ಕಿ.ಮೀ. ವ್ಯಾಪ್ತಿಯಲ್ಲಿ ಮದ್ಯಮುಕ್ತ ದಿನ ಎಂದು ಜಿಲ್ಲಾ ದಂಡಾಧಿಕಾರಿಗಳೂ ಆಗಿರುವ ಜಿಲ್ಲಾಧಿಕಾರಿಯವರು ಆದೇಶ ಹೊರಡಿಸಿದ್ದಾರೆ.

ಈ ದಿನಗಳಂದು ಎಲ್ಲಾ ವಿಧದ ಮದ್ಯದಂಗಡಿಗಳನ್ನು ಮತ್ತು ಮದ್ಯ ಮಾರಾಟದ ಪರವಾನಿಗೆ ಇರುವ ಅಂಗಡಿಗಳನ್ನು ಹಾಗೂ ಮಾರಾಟ ಕೇಂದ್ರಗಳನ್ನು, ಹೋಟೆಲ್‍ಗಳು, ನಾನ್ ಪ್ರೊಪ್ರೈಟರ್‍ಗಳಲ್ಲಿ ಹಾಗೂ ಸ್ಟಾರ್ ಹೋಟೆಲ್‍ಗಳಲ್ಲಿ ಮದ್ಯ ಮಾರಾಟ ಮತ್ತು ಸರಬರಾಜು ಮಾಡುವುದು ನಿಷೇಧಿಸಲಾಗಿರುತ್ತದೆ.

- Advertisement -

Related news

error: Content is protected !!