Friday, April 19, 2024
spot_imgspot_img
spot_imgspot_img

ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಎಬಿವಿಪಿ ವತಿಯಿಂದ ಪ್ರತಿಭಟನೆ

- Advertisement -G L Acharya panikkar
- Advertisement -

ಮಂಗಳೂರು: ರಾಜ್ಯದ ಎಲ್ಲಾ ಕಾಲೇಜುಗಳಿಗೆ ಅತಿಥಿ ಉಪನ್ಯಾಸಕರನ್ನು ನೇಮಿಸಲು ಹಾಗೂ ಎಲ್ಲಾ ಸರ್ಕಾರಿ ವಸತಿ ನಿಲಯಗಳಲ್ಲಿ ವಿದ್ಯಾರ್ಥಿಗಳಿಗೆ ಅವಕಾಶ ಮಾಡಿಕೊಡಲು ಆಗ್ರಹಿಸಿ ಎಬಿವಿಪಿ ಮಂಗಳೂರು ವತಿಯಿಂದ ಹಂಪನಕಟ್ಟೆ ಕ್ಲಾಕ್ ಟವರ್ ಬಳಿ ಪ್ರತಿಭಟನೆ ನಡೆಯಿತು.

ಕೋವಿಡ್ ನಂತರದಲ್ಲಿ ಎಲ್ಲಾ ಶಾಲಾ-ಕಾಲೇಜುಗಳಲ್ಲಿಪೂರ್ಣಪ್ರಮಾಣದಲ್ಲಿ ಆರಂಭಗೊಂಡಿರುವುದು ಸಂತಸದ ವಿಷಯ. ಆದರೆ ಸರ್ಕಾರಿ ಕಾಲೇಜುಗಳಿಗೆ ಇದುವರೆಗೆ ಅತಿಥಿ ಉಪನ್ಯಾಸಕರನ್ನು ನೇಮಕ ಮಾಡದೆ ಇರುವುದನ್ನು ಎಬಿವಿಪಿ ತೀವ್ರವಾಗಿ ಖಂಡಿಸುತ್ತದೆ. ಕೋವಿಡ್ ಕಾರಣದಿಂದ ಶೈಕ್ಷಣಿಕ ಚಟುವಟಿಕೆಗಳು ಹಲವು ತಿಂಗಳುಗಳ ಕಾಲ ಆನ್ಲೈನ್ ಮುಖಾಂತರ ನಡೆಯುತ್ತಿದ್ದವು ಖಾಸಗಿ ಶಿಕ್ಷಣ ಸಂಸ್ಥೆಗಳು ಆನ್ಲೈನ್ ತರಗತಿಗಳನ್ನು ಸೂಕ್ತವಾಗಿ ನಡೆಸಿವೆ.ಆದರೆ ಸರಕಾರಿ ಪದವಿ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರ ಕೊರತೆಯಿಂದ ಸಾಕಷ್ಟು ಪ್ರಮಾಣದ ಪಾರು ಚಟುವಟಿಕೆಗಳು ನಡೆದಿಲ್ಲ. ಆದ್ದರಿಂದ ರಾಜ್ಯ ಸರ್ಕಾರ ಕೂಡಲೇ ರಾಜ್ಯದ ಎಲ್ಲಾ ಪದವಿ ಕಾಲೇಜುಗಳಿಗೆ ತಕ್ಷಣದಿಂದಲೇ ಅತಿಥಿ ಉಪನ್ಯಾಸಕರನ್ನು ನೇಮಿಸಬೇಕೆಂದು ಪ್ರತಿಭಟನೆಯನ್ನು ಉದ್ದೇಶಿಸಿ ಎಬಿವಿಪಿ ರಾಜ್ಯ ಸಹಕಾರ್ಯದರ್ಶಿ ಸಂದೇಶ್ ರೈ ಮಜಕ್ಕಾರ್ ಆಗ್ರಹಿಸಿದರು.

ರಾಜ್ಯದಲ್ಲಿ ಶೈಕ್ಷಣಿಕ ಚಟುವಟಿಕೆಗಳು ಪುನರಾರಂಭಗೊಂಡಿದೆ ಆದರೆ ಸರ್ಕಾರಿ ವಸತಿ ನಿಲಯ ಗಳಲ್ಲಿ ಮೊದಲ ವರ್ಷದ ವಿದ್ಯಾರ್ಥಿಗಳಿಗೆ ಪ್ರವೇಶಾತಿಯನ್ನು ನಿರಾಕರಿಸುತ್ತಿದೆ. ಆದ್ದರಿಂದ ಸರ್ಕಾರಿ ವಸತಿ ನಿಲಯಗಳಿಗೆ ಎಲ್ಲಾ ವಿದ್ಯಾರ್ಥಿಗಳಿಗೆ ಪ್ರವೇಶಾತಿಯನ್ನು ನೀಡಬೇಕೆಂದು ಎಬಿವಿಪಿ ಆಗ್ರಹಿಸುತ್ತದೆ.

ಪ್ರತಿಭಟನೆಯಲ್ಲಿ ಎಬಿವಿಪಿ ಮಂಗಳೂರು ನಗರ ಸಂಘಟನಾ ಕಾರ್ಯದರ್ಶಿ ಅಜಯ್ ಪ್ರಭು, ನಗರ ಕಾರ್ಯದರ್ಶಿ ಶ್ರೇಯಸ್ ಶೆಟ್ಟಿ , ರಾಷ್ಟ್ರೀಯ ಕಾರ್ಯಕಾರಿಣಿ ಸದಸ್ಯೆ ದೀಪ್ತಿ, ರಾಜ್ಯ ಕಾರ್ಯಕಾರಿಣಿ ಸದಸ್ಯರಾದ ನಿಶಾನ್ ಆಳ್ವ , ಅಕ್ಷಯ್ ಕಾಮಾಜೆ, ನಗರ ಸಹ ಕಾರ್ಯದರ್ಶಿ ಶ್ರೇಯಸ್ , ವಿದ್ಯಾರ್ಥಿ ನಾಯಕರಾದ ನೀಲೇಶ್, ಆದಿತ್ಯ ಶೆಟ್ಟಿ, ಭವನಿಷ್ , ಆದರ್ಶ್ , ರೋಹನ್, ಧನುಷ್, ರಜತ್ , ಧನುಷ್ , ಯಕ್ಷಿತ , ಕವನ ಆದಿತ್ಯ ಕೆ ಆರ್, ಸಂಜನ್, ಸಾಯಿ ಶರಣ್ ಉಪಸ್ಥಿತರಿದ್ದರು.

- Advertisement -

Related news

error: Content is protected !!