Wednesday, May 1, 2024
spot_imgspot_img
spot_imgspot_img

ಪುತ್ತೂರು: 9ಜನ ಯುವಕರ ಮೇಲೆ ಪೊಲೀಸರಿಂದ ಹಲ್ಲೆ ಪ್ರಕರಣ; ಪುತ್ತೂರು ಡಿಎಸ್‌ಪಿ, ಸಬ್‌ಇನ್ಸ್‌ಪೆಕ್ಟರ್‌ ಹಾಗೂ ಪೊಲೀಸ್‌ ವಿರುದ್ದ ಪ್ರಕರಣ ದಾಖಲು- ಪಿಎಸ್‌ಐ ಮತ್ತು ಪಿಸಿ ಅಮಾನತು..!!

- Advertisement -G L Acharya panikkar
- Advertisement -

ಪುತ್ತೂರು: ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಹಾಗೂ ಮಾಜಿ ಸಚಿವ ಡಿ.ವಿ ಸದಾನಂದ ಗೌಡರ ಶ್ರದ್ಧಾಂಜಲಿ ಕೋರಿ, ಚಪ್ಪಲಿ ಹಾರ ಹಾಕಿದ್ದ ಪ್ರಕರಣದಲ್ಲಿ ಪುತ್ತೂರು ನಗರ ಠಾಣೆಯಲ್ಲಿ ವಿಚಾರಣೆಗೆ ಒಳಪಡಿಸಿದ 9ಜನ ಆರೋಪಿಗಳಿಗೆ ಪೊಲೀಸರು ಹಲ್ಲೆ ಮಾಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಇಬ್ಬರು ಪೊಲೀಸ್ ಅಧಿಕಾರಿಗಳನ್ನು ಅಮಾನತುಗೊಳಿಸಲಾಗಿದೆ.

Dsp ಪುತ್ತೂರು, PSI ಪುತ್ತೂರು ಗ್ರಾಮಾಂತರ ಠಾಣೆ, ಹರ್ಷಿತ್PC, ಪುತ್ತೂರು ಗ್ರಾಮಾಂತರ ಠಾಣೆ ಅರವರುಗಳ ವಿರುದ್ಧ ಪುತ್ತೂರು ನಗರ ಠಾಣೆ Cr no.39/23u/s 323,324,506 r/w 34IPC ರಂತೆ ಪ್ರಕರಣ ದಾಖಲಾಗಿದೆ.

ಪ್ರಕರಣದ ತನಿಖೆಯನ್ನು DSP ಬಂಟ್ವಾಳರವರಿಗೆ ವಹಿಸಲಾಗಿದೆ. ಹೆಚ್ಚುವರಿ ಪೊಲೀಸ್ ಅಧೀಕ್ಷಕರ ವಿಚಾರಣೆ ವರದಿ ಆಧಾರದ ಮೇಲೆ PSI ಪುತ್ತೂರು ಗ್ರಾಮಾಂತರ ಠಾಣೆ ಹಾಗೂ ಹರ್ಷಿತ್ PC ರವರುಗಳನ್ನು ಸೇವೆಯಿಂದ ಅಮಾನತ್ತುಗೊಳಿಸಲಾಗಿದೆ ಹಾಗೂ DSP ಪುತ್ತೂರುರವರ ವಿರುದ್ಧ ಸೂಕ್ತ ಇಲಾಖಾ ಶಿಸ್ತು ಕ್ರಮ ಕೈಗೊಳ್ಳಲು ವರದಿಯನ್ನು ಮೇಲಾಧಿಕಾರಿಗಳಿಗೆ ಸಲ್ಲಿಸಲಾಗಿದೆ.

- Advertisement -

Related news

error: Content is protected !!