Monday, July 20, 2026
spot_imgspot_img
spot_imgspot_img

70 ಸಾವಿರ ರೂಪಾಯಿ ಲಂಚ ಪಡೆಯುತ್ತಿದ್ದಾಗ ಲೋಕಾಯುಕ್ತ ಬಲೆಗೆ ಬಿದ್ದ ಪಿಎಸ್‌ಐ & ಎಎಸ್‌ಐ

- Advertisement -
- Advertisement -

ಚಿಕ್ಕಬಳ್ಳಾಪುರ: ಪ್ರಕರಣವೊಂದರ ಬಿ ರಿಪೋರ್ಟ್ ಸಲ್ಲಿಕೆಗೆ 70 ಸಾವಿರ ಲಂಚ ಪಡೆದ ಪ್ರಕರಣದಲ್ಲಿ ASI ಹಾಗೂ PSI ಇಬ್ಬರನ್ನ ಲೋಕಾಯುಕ್ತ ಪೊಲೀಸರು ವಶಕ್ಕೆ ಪಡೆದಿರುವ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ.ಚಿಕ್ಕಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯ ಪಿಎಸ್ಐ ಶರಣಪ್ಪ ಹಾಗೂ ಎಎಸ್‌ಐ ವೆಂಕಟೇಶ್ ಇಬ್ಬರನ್ನ ಚಿಕ್ಕಬಳ್ಳಾಪುರ ಲೋಕಾಯುಕ್ತ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ಮುಂದುವರೆಸಿದ್ದಾರೆ.

ಚಿಕ್ಕಬಳ್ಳಾಪುರ ತಾಲೂಕಿನ ಮೋಟಲೂರು ಗ್ರಾಮದ ರಘು ಎಂಬಾತನ ಬಳಿ ಪ್ರಕರಣ ಒಂದರ ಬಿ ರಿಪೋರ್ಟ್ ಸಲ್ಲಿಕೆಗಾಗಿ 1 ಲಕ್ಷ ಹಣಕ್ಕಾಗಿ ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ. ಈ ಸಂಬಂಧ 70 ಸಾವಿರ ರೂಪಾಯಿ ಲಂಚ ಪಡೆಯುವಾಗ ಚಿಕ್ಕಬಳ್ಳಾಪುರ ನಗರದ ಕನ್ನಡ ಭವನದ ಬಳಿ ಎಎಸ್‌ಐ ವೆಂಕಟೇಶ್ ರನ್ನ ರೆಡ್ ಅಂಡ್ ಆಗಿ ಹಿಡಿಯಲಾಗಿದೆ.ನಂತರ ಪಿಎಸ್‌ಐ ಶರಣಪ್ಪ ಅವರನ್ನು ಬಂಧಿಸಲಾಗಿದೆ. ನಂತರ ಪಿಎಸ್‌ಐ ಮತ್ತು ಎಎಸ್‌ಐ ಅವರನ್ನ ಪ್ರತ್ಯೇಕವಾಗಿ ವಿಚಾರಣೆಗೊಳಪಡಿಸಿದ್ದಾರೆ ಎಂದು ವರದಿ ಮೂಲಕ ತಿಳಿದು ಬಂದಿದೆ.

- Advertisement -

Related news

error: Content is protected !!