Friday, April 26, 2024
spot_imgspot_img
spot_imgspot_img

ಸಾರ್ವಜನಿಕರ ನಿರ್ಲಕ್ಷ್ಯತೆ ಯೇ ಕೊರೋನಾ ಹೆಚ್ಚಳಕ್ಕೆ ಕಾರಣ- ಡಾ.ಸುಧಾಕರ್

- Advertisement -G L Acharya panikkar
- Advertisement -

ರಾಜ್ಯದಲ್ಲಿ ಕೊರೋನಾ ಸೋಂಕು ದಿನೇ ದಿನೇ ಹೆಚ್ಚುತ್ತಿದೆ. ಇದಕ್ಕೆ ಮುಖ್ಯ ಕಾರಣ ಸಾರ್ವಜನಿಕರ ನಿರ್ಲಕ್ಷ್ಯ ಕೂಡ ಆಗಿದೆ ಎಂದು ವೈದ್ಯಕೀಯ ಸಚಿವ ಡಾ. ಸುಧಾಕರ್​ ತಿಳಿಸಿದ್ದಾರೆ.

ರಾಜ್ಯದಲ್ಲಿ ಕೊರೋನಾ ಹೆಚ್ಚಳ ಕುರಿತು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ರಾಜ್ಯದಲ್ಲಿ  ಕೊರೋನಾ ಸೋಂಕು ನಿಧಾನವಾಗಿ ಏರಿಕೆಯಾಗುತ್ತಿದೆ. ಲಾಕ್​ಡೌನ್​ ಬಳಿಕ ಜನರು ಕೊರೋನಾ ಹೋಗಿದೆ ಎಂದು ತಿಳಿದುಕೊಂಡಿದ್ದಾರೆ.  ಸಾಮಾಜಿಕ ಅಂತರ ಮರೆತಿದ್ದು, ಮಾಸ್ಕ್​ ಬಳಕೆಯನ್ನು ಕಡಿಮೆ ಮಾಡಿದ್ದಾರೆ. ಅಲ್ಲದೇ ಜನರು ಸಭೆ ಸಮಾರಂಭಗಳಲ್ಲಿ ಭಾಗಿಯಾಗುತ್ತಿದ್ದು, ಕೊರೋನಾ ಕುರಿತ ಜಾಗೃತಿ ಮರೆಯುತ್ತಿದ್ದಾರೆ. ಇದರಿಂದ ರಾಜ್ಯದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸೋಂಕಿತರು ಕಂಡು ಬರುತ್ತಿದ್ದಾರೆ ಎಂದು ಕಳವಳ ವ್ಯಕ್ತಪಡಿಸಿದರು. 

ಜನರ ಜೀವ ರಕ್ಷಣೆ ನಮಗೆ ಮುಖ್ಯವಾಗಿದೆ. ಈ ಹಿನ್ನಲೆಯಲ್ಲಿ ಇನ್ಮುಂದೆ ಸಭೆ, ಸಮಾರಂಭಗಳನ್ನು ಪಡೆಯಲು ಒಪ್ಪಿಗೆ ಪಡೆಯುವುದು ಅನಿವಾರ್ಯವಾಗಿದೆ. ಈ ಕುರಿತು ಚರ್ಚೆ ನಡೆಸಲಾಗುವುದು. ಜನರು ಸೇರಬಾರದು ಎಂಬ ಉದ್ದೇಶದಿಂದಲೇ ಇನ್ನು ಶಿಕ್ಷಣ ಸಂಸ್ಥೆಗಳನ್ನು ತೆರೆಯಲು ಅವಕಾಶ ನೀಡಿಲ್ಲ ಎಂದು ಇದೇ ವೇಳೆ ಸ್ಪಷ್ಟಪಡಿಸಿದರು.

- Advertisement -

Related news

error: Content is protected !!