Monday, June 8, 2026
spot_imgspot_img
spot_imgspot_img

ಅಳಿಕೆ : ಮಡಿಯಾಲ ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ಸಾರ್ವಜನಿಕ ಮೊಸರು ಕುಡಿಕೆ ಉತ್ಸವ ಹಾಗೂ ಕೃಷ್ಣ ವೇಷ ಸ್ಪರ್ಧೆ

- Advertisement -
- Advertisement -

ಅಳಿಕೆ; ಮಡಿಯಾಲ ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ಸಾರ್ವಜನಿಕ ಮೊಸರು ಕುಡಿಕೆ ಉತ್ಸವ ಸಮಿತಿಯ ವತಿಯಿಂದ ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ಸಾರ್ವಜನಿಕ ಮೊಸರು ಕುಡಿಕೆ ಉತ್ಸವ ಹಾಗೂ ಕೃಷ್ಣ ವೇಷ ಸ್ಪರ್ಧೆ,ಸಾರ್ವಜನಿಕರಿಗೆ ವಿವಿಧ ರೀತಿಯ ಆಟೋಟ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು.

ಗೋಪಾಲಕೃಷ್ಣ ದೇವರಿಗೆ ವಿಶೇಷ ಪೂಜೆಯನ್ನು ಸಲ್ಲಿಸಿ ನಂತರ ಸಾರ್ವಜನಿಕ ಆಟೋಟ ಸ್ಪರ್ಧೆಯನ್ನು ಅಳಿಕೆ ವಿದ್ಯಾ ಸಂಸ್ಥೆಯ ಕಾರ್ಯದರ್ಶಿಗಳಾದ ಚಂದ್ರಶೇಖರ್ ಭಟ್, ಅಳಿಕೆ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಪದ್ಮನಾಭ ಪೂಜಾರಿ ಸಣ್ಣಗುತ್ತು ಉದ್ಘಾಟಿಸಿದರು.

ದೇವಸ್ಥಾನದ ಆಡಳಿತ ಮಂಡಳಿ ಮುಖ್ಯಸ್ಥರು ಉಪಸ್ಥಿತರಿದ್ದರು. ಈ ಕಾರ್ಯಕ್ರಮವು ಯಶಸ್ವಿಯಾಗಿ ನಡೆಯಲು ಭಗವದ್ಭಕ್ತರು ಗ್ರಾಮಸ್ಥರು ಹಾಗೂ ಸಮಿತಿ ಎಲ್ಲಾ ಸದಸ್ಯರು ಸಹಕರಿಸಿದರು

- Advertisement -

Related news

error: Content is protected !!