Tuesday, July 28, 2026
spot_imgspot_img
spot_imgspot_img

ರಾಜ್ಯದಲ್ಲಿ ದ್ವಿತೀಯ ಪಿಯುಸಿ ಪ್ರಾಯೋಗಿಕ ಪರೀಕ್ಷೆ‌ ಮುಂದೂಡಿಕೆ

- Advertisement -
- Advertisement -

ಬೆಂಗಳೂರು: ಕೊರೊನಾ ಸೋಂಕಿನ 2ನೇ ಅಲೆಯ ಹೆಚ್ಚಳದ ಹಿನ್ನೆಲೆಯಲ್ಲಿ, ಇದೀಗ 2020-21 ನೇ ಸಾಲಿನ ದ್ವಿತೀಯ ಪಿಯುಸಿ ಪ್ರಾಯೋಗಿಕ ಪರೀಕ್ಷಾ ದಿನಾಂಕವನ್ನು ಮುಂದೂಡಿಕೆ ಮಾಡಿ, ಪದವಿಪೂರ್ವ ಶಿಕ್ಷಣ ಇಲಾಖೆ ಆದೇಶಿಸಿದೆ.

ಏಪ್ರಿಲ್ 28 ರಿಂದ ಪ್ರಾರಂಭವಾಗಬೇಕಿದ್ದ ದ್ವಿತೀಯ ಪಿಯುಸಿ ಪ್ರಾಯೋಗಿಕ ಪರೀಕ್ಷೆಗಳನ್ನು ಮುಂದೂಡಲಾಗಿದೆ ಎಂದು ಸಚಿವ ಎಸ್. ಸುರೇಶ್ ಕುಮಾರ್ ಪ್ರಕಟಣೆಯ ಮೂಲಕ ತಿಳಿಸಿದ್ದಾರೆ.

ಈ ಕುರಿತಂತೆ ಪದವಿಪೂರ್ವ ಶಿಕ್ಷಣ ಇಲಾಖೆಯ ನಿರ್ದೇಶಕರು ಸುತ್ತೋಲೆ ಹೊರಡಿಸಿದ್ದು, ಪದವಿಪೂರ್ವ ಶಿಕ್ಷಣ ಇಲಾಖೆಯು 2020-21 ನೇ ಸಾಲಿನ ದ್ವಿತೀಯ ಪಿಯುಸಿ ಪ್ರಾಯೋಗಿಕ ಪರೀಕ್ಷೆಯನ್ನು ಏಪ್ರಿಲ್ 28 ರಿಂದ ಮೇ 18ರವರೆಗೆ ನಡೆಸಲು ತೀರ್ಮಾನಿಸಿ ಸುತ್ತೋಲೆಯನ್ನು ಹೊರಡಿಸಲಾಗಿತ್ತು. ಕೋವಿಡ್-19 ರ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಪ್ರಾಯೋಗಿಕ ಪರೀಕ್ಷೆಯನ್ನು ಆಯಾ ಕಾಲೇಜುಗಳ ಹಂತದಲ್ಲಿಯೇ ನಡೆಸಲು ಸೂಚಿಸಲಾಗಿತ್ತು.

ಹೆಚ್ಚುತ್ತಿರುವ ಕೋವಿಡ್19 ಸೋಂಕಿನ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಆರೋಗ್ಯದ ದೃಷ್ಟಿಯಿಂದ ಈ‌ ನಿರ್ಧಾರ ತೆಗೆದುಕೊಳ್ಳಲಾಗಿದ್ದು, ವಾರ್ಷಿಕ ಪರೀಕ್ಷೆಗಳು ಮುಗಿದ ಕೂಡಲೇ ಪ್ರಾಯೋಗಿಕ ಪರೀಕ್ಷೆಗಳನ್ನು ನಡೆಸುವ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದಿದ್ದಾರೆ.

ವಿವಿಧ ಶಿಕ್ಷಣ ಸಂಸ್ಥೆಗಳ ಮುಖ್ಯಸ್ಥರು, ಜನಪ್ರತಿನಿಧಿಗಳು, ಪೋಷಕರುಗಳೊಂದಿಗೆ ಅಧಿಕಾರಿ ಹಂತದ ಸುದೀರ್ಘ ಚರ್ಚೆಗಳನ್ನು ನಡೆಸಿ ಈ ತೀರ್ಮಾನ ತೆಗೆದುಕೊಳ್ಳಲಾಗಿದೆ, ವಿದ್ಯಾರ್ಥಿ ಹಿತ ಕಾಯಲು ಸರ್ಕಾರ ಬದ್ಧವಾಗಿದೆ‌ ಎಂದು ಅವರು ಹೇಳಿದ್ದಾರೆ.

2020-21 ನೇ ಶೈಕ್ಷಣಿಕ ಸಾಲಿನ ದ್ವಿತೀಯ ಪಿಯುಸಿ ಪ್ರಾಯೋಗಿಕ ಪರೀಕ್ಷೆಗಳನ್ನು ಉಲ್ಲೇಖ-2 ರ ಸುತ್ತೋಲೆಯಲ್ಲಿ ನೀಡಿದ ನಿರ್ದೇಶನದಂತೆ ಆಯಾ ಕಾಲೇಜುಗಳಲ್ಲೇ ತಾತ್ವಿಕ ಪರೀಕ್ಷೆಗಳು ಮುಕ್ತಾಯಗೊಂಡ ಕೂಡಲೇ 2 ದಿನಗಳ ನಂತರ ಪ್ರಾರಂಭಿಸಲು ಆದೇಶಿಸಿದ್ದಾರೆ.

driving
- Advertisement -

Related news

error: Content is protected !!