Friday, April 19, 2024
spot_imgspot_img
spot_imgspot_img

ದ್ವಿತೀಯ PU ಫಲಿತಾಂಶದಲ್ಲಿ ಮತ್ತೊಂದು ಬದಲಾವಣೆ: SSLC ಅಂಕಗಳನ್ನೂ ಪರಿಗಣಿಸಿ ಫಲಿತಾಂಶ ಘೋಷಣೆ!

- Advertisement -G L Acharya panikkar
- Advertisement -

ಬೆಂಗಳೂರು : ನಿನ್ನೆ ದ್ವಿತೀಯ ಪಿಯುಸಿ ಪರೀಕ್ಷೆಯನ್ನು ರದ್ದು ಪಡಿಸಿ, ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್ ಸುರೇಶ್ ಕುಮಾರ್ ಘೋಷಣೆ ಮಾಡಿದ್ದರು. ಇದಕ್ಕೆ ಮಾನದಂಡವಾಗಿ ಪ್ರಥಮ ಪಿಯುಸಿ ಅಂಕ ಆಧರಿಸಿ, ಪಾಸ್ ಮಾಡುವುದಾಗಿ ತಿಳಿಸಿದ್ದರು. ಆದ್ರೇ.. ಇಂದು ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಮತ್ತೊಂದು ಗುಡ್ ನ್ಯೂಸ್ ನೀಡಿದ್ದು, ಎಸ್.ಎಸ್.ಎಸ್.ಎಲ್.ಸಿ ಅಂಕಗಳನ್ನೂ ಪರಿಗಣಿಸಿ ದ್ವಿತೀಯ ಪಿಯು ಫಲಿತಾಂಶ ಘೋಷಣೆ ಮಾಡಲಾಗುತ್ತದೆ ಎಂಬುದಾಗಿ ತಿಳಿಸಿದ್ದಾರೆ.

ಈ ಕುರಿತಂತೆ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಇಂದಿನ ಸಂದರ್ಭದಲ್ಲಿ, ದ್ವಿತೀಯ ಪಿಯು ವಿದ್ಯಾರ್ಥಿಗಳ ಪರೀಕ್ಷಾ ಫಲಿತಾಂಶವು ಇನ್ನಷ್ಟು ಸಮಗ್ರವಾಗಲು, ಹಾಗೂ ಹೆಚ್ಚು ನ್ಯಾಯಯುತವಾಗಲು ಈ ವಿದ್ಯಾರ್ಥಿಗಳ ಎಸ್.ಎಸ್.ಎಲ್.ಸಿ ಫಲಿತಾಂಶಗಳನ್ನೂ ಅವಲೋಕಿಸಿ, ಸೂಕ್ತ ಮೌಲ್ಯವನ್ನು ಕಲ್ಪಿಸುವ ಮೂಲಕ ಫಲಿತಾಂಶ ಘೋಷಣೆ ಮಾಡಬೇಕೆಂದು ಸಚಿವ ಸುರೇಶ್ ಕುಮಾರ್ ಅಧಿಕಾರಿಗಳಿಗೆ ತಿಳಿಸಿದ್ದಾರೆ.

ಈ ಬಗ್ಗೆ ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯ ವತಿಯಿಂದ ಅಂಕಿ ಅಂಶಗಳನ್ನು ಪಡೆದು, ಪ್ರಥಮ ಪಿಯು ಅಂಕಗಳೊAದಿಗೆ ಸೂಕ್ತ ರೀತಿಯಲ್ಲಿ ಹೊಂದಿಸಿ ಜೂನ್ ಮಾಸಾಂತ್ಯಕ್ಕೆ ಗ್ರೇಡಿಂಗ್ ಫಲಿತಾಂಶಗಳನ್ನು ಘೋಷಿಸುವ ವ್ಯವಸ್ಥೆ ಮಾಡಬೇಕೆಂದು ಅಧಿಕಾರಿಗಳಿಗೆ ತಿಳಿಸಿದ್ದಾರೆ

- Advertisement -

Related news

error: Content is protected !!