ಮಂಗಳೂರು:- ದಕ್ಷಿಣ ಕನ್ನಡ ಹಾಗೂ ಉಡುಪಿ ಮೊದಲ ಸ್ಥಾನವನ್ನು ಹಂಚಿಕೊಂಡಿದೆ. ಜಿಲ್ಲೆಯಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಪರೀಕ್ಷಾ ಫಲಿತಾಂಶದಲ್ಲಿ, ದಕ್ಷಿಣ ಕನ್ನಡ ಜಿಲ್ಲೆ ಉತ್ತಮ ಸಾಧನೆ ಮಾಡಿದೆ.ಜಿಲ್ಲೆಯಲ್ಲಿ ಪರೀಕ್ಷೆಗೆ ಹಾಜರಾದ ಶೇಕಡಾ 86.02% ವಿದ್ಯಾರ್ಥಿಗಳು ಪಾಸ್ ಹಾಗಿದ್ದಾರೆ.ದ.ಕ ಜಿಲ್ಲೆಯಲ್ಲಿ ಒಟ್ಟು 34,287 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು.ಅದರಲ್ಲಿ 29,494 ವಿದ್ಯಾರ್ಥಿಗಳು ಪಾಸಾಗಿದ್ದಾರೆ.
ವಾಣಿಜ್ಯ ವಿಭಾಗದಲ್ಲಿ ಮಂಗಳೂರಿನ ವಿಕಾಸ್ ಕಾಲೇಜಿನ ವಿದ್ಯಾರ್ಥಿನಿ ಅಪೂರ್ವ 594 ಅಂಕ ಗಳಿಸಿ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದ್ದು, ಹಾಗೂ ರಾಜ್ಯಕ್ಕೆ ನಾಲ್ಕನೇ ಸ್ಥಾನ ಪಡೆದಿದ್ದಾರೆ.
ವಿಜ್ಞಾನ ವಿಭಾಗದಲ್ಲಿ ಮಂಗಳೂರಿನ ಬಾಸ್ಕೋಸ್ ಕಾಲೇಜಿನ ವಿದ್ಯಾರ್ಥಿನಿ ಪೃಥ್ವಿ , 592 ಅಂಕ ಗಳಿಸಿ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದಿದ್ದಾರೆ.
ಈ ಬಾರಿ ಕಲಾ ವಿಭಾಗದಲ್ಲಿ – 64.92% ವಿದ್ಯಾರ್ಥಿಗಳು, ವಾಣಿಜ್ಯ ವಿಭಾಗದಲ್ಲಿ – 85.48% , ಹಾಗೂ ವಿಜ್ಞಾನ ವಿಭಾಗದಲ್ಲಿ – 93.69% ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಜಿಲ್ಲೆಯಲ್ಲಿ ವಿದ್ಯಾರ್ಥಿನಿಯರದ್ದೇ ಮೇಲು ಗೈ.ಈ ವರ್ಷವೂ ಸಹ ಪರೀಕ್ಷೆ ಹಾಜರಾದ ವಿದ್ಯಾರ್ಥಿನಿಯರಲ್ಲಿ 90.53% ಪಾಸಾಗಿದ್ದಾರೆ.
ಒಟ್ಟು ಜಿಲ್ಲೆಯಲ್ಲಿ 17,189 ವಿದ್ಯಾರ್ಥಿನಿಯರು ಪರೀಕ್ಷೆ ಹಾಜರಾಗಿದ್ದರೆ, ಹಾಗೂ 17,098, ಬಾಲಕರು ಪರೀಕ್ಷೆ ಎದುರಿಸಿದ್ದು,ಅದರಲ್ಲಿ ಶೇ. 81.49 ಮಂದಿ ಪಾಸಾಗಿದ್ದರು.
ನಗರ ಭಾಗದ ವಿದ್ಯಾರ್ಥಿಗಳಿಂದಲೇ ಹೆಚ್ಚಿನ ಸಾಧನೆ:-
ಜಿಲ್ಲೆಯ ನಗರ ಪ್ರದೇಶದಲ್ಲಿ ಶೇ. 89.33 ಫಲಿತಾಂಶ ಸಾಧನೆ ಮಾಡಿದ್ದಾರೆ, ಗ್ರಾಮೀಣ ಭಾಗದಲ್ಲಿ ಶೇ. 79.85 ಫಲಿತಾಂಶ ಬಂದಿದೆ.