Tuesday, April 16, 2024
spot_imgspot_img
spot_imgspot_img

ಪಿಯುಸಿಯ ಪಠ್ಯದಲ್ಲಿ ಶೇಕಡಾ.30ರಷ್ಟು ಕಡಿತ – ಪದವಿಪೂರ್ವ ಶಿಕ್ಷಣ ಇಲಾಖೆ

- Advertisement -G L Acharya panikkar
- Advertisement -

ಬೆಂಗಳೂರು(ಅ.22): ಕೊರೊನಾದಿಂದ ಕಾಲೇಜುಗಳು ಪುನಾರಾರಂಭಗೊಳ್ಳದ ಹಿನ್ನೆಲೆ ಪಿಯುಸಿಯ ಶೇಕಡಾ.30ರಷ್ಟು ಪಠ್ಯವನ್ನು ಕಡಿತಗೊಳಿಸಲು ಪದವಿಪೂರ್ವ ಶಿಕ್ಷಣ ಇಲಾಖೆ ನಿರ್ಧರಿಸಿದೆ.

ವಿಜ್ಞಾನ ವಿಷಯಗಳ ಪಠ್ಯವನ್ನು ಸಿಬಿಎಸ್‌ಇ ಶಿಕ್ಷಣ ಮಂಡಳಿ ನಿಗದಿಪಡಿಸಿದಂತೆ ಯಥಾವತ್​ ಆಗಿ‌ ಅಳವಡಿಸಲು ತೀರ್ಮಾನ ಮಾಡಲಾಗಿದೆ. ಇತರೆ ಒಟ್ಟು 34 ವಿಷಯಗಳಲ್ಲಿ ಕರ್ನಾಟಕ ಸಂಗೀತ ವಿಷಯಕ್ಕೆ ಕಳೆದ ಎರಡು ವರ್ಷಗಳಲ್ಲಿ ಯಾವುದೇ ವಿದ್ಯಾರ್ಥಿ ದಾಖಲಾಗದೇ ಇರುವುದರಿಂದ ಆ ವಿಷಯವನ್ನು ಪಠ್ಯ ಕಡಿತ ಪ್ರಕ್ರಿಯೆಯಿಂದ ಕೈಬಿಡಲು ತೀರ್ಮಾನಿಸಲಾಗಿದೆ.

ಪ್ರಥಮ ಮತ್ತು ದ್ವಿತೀಯ ಪಿಯುಸಿ ತರಗತಿಗಳ ವಿಜ್ಞಾನ ವಿಷಯಗಳನ್ನು (ಭೌತ ವಿಜ್ಞಾನ, ರಸಾಯನ ವಿಜ್ಞಾನ, ಜೀವ ವಿಜ್ಞಾನ, ಗಣಿತ ಶಾಸ್ತ್ರ) ಹೊರತುಪಡಿಸಿ ಇತರೆ ವಿಷಯಗಳಲ್ಲಿ ಪಠ್ಯವನ್ನು ಕಡಿತಗೊಳಿಸಲು ಪಿಯು ಬೋರ್ಡ್ ನಿರ್ಧಾರ ಮಾಡಿದೆ. ಈ ಪಠ್ಯಕ್ರಮ 2020–21ನೇ ಶೈಕ್ಷಣಿಕ ವರ್ಷಕ್ಕೆ ಮಾತ್ರ ಅನ್ವಯವಾಗಲಿದೆ ಎಂದು ತಿಳಿಸಿದೆ.

ಕಡಿತಗೊಳಿಸಬಹುದಾದ ಪಠ್ಯಗಳ ಕುರಿತು ಪಠ್ಯ ಪುಸ್ತಕ ರಚನಾ ಸಮಿತಿ ಮತ್ತು ಪರಿಷ್ಕರಣಾ ಸಮಿತಿಯ ಸದಸ್ಯರು ವರದಿ ನೀಡಿದ್ದು, ಇಲಾಖೆಯ ವೆಬ್‌ಸೈಟ್‌ನಲ್ಲಿ ಕಡಿತಗೊಳಿಸಿದ ಪಠ್ಯಗಳ ಮಾಹಿತಿ ಲಭ್ಯವಿದೆ.

- Advertisement -

Related news

error: Content is protected !!