Sunday, July 19, 2026
spot_imgspot_img
spot_imgspot_img

ವಿಟ್ಲ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಪಲ್ಸ್‌ ಪೋಲಿಯೋ ಲಸಿಕೆ ಕಾರ್ಯಕ್ರಮ

- Advertisement -
- Advertisement -

ವಿಟ್ಲ ಪಟ್ಟಣ ಪಂಚಾಯತ್‌ ಸ್ಥಾಯಿ ಸಮಿತಿ ಅಧ್ಯಕ್ಷ ಅಶೋಕ್‌ ಶೆಟ್ಟಿಯವರಿಂದ ಚಾಲನೆ

ವಿಟ್ಲ: ಆರೋಗ್ಯವಂತ ಸಮಾಜ ನಿರ್ಮಾಣಕ್ಕೆ 5 ವರ್ಷದೊಳಗಿನ ಮಕ್ಕಳಿಗೆ ಪಲ್ಸ್‌ ಪೋಲಿಯೋ ಲಸಿಕೆ ಕಾರ್ಯಕ್ರಮ ವಿಟ್ಲ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಡಿ. 21 ನೇ ಆದಿತ್ಯವಾರ ಆಯೋಜಿಸಲಾಗಿತ್ತು.

ಎರಡು ಹನಿಗಳು-ಪೋಲಿಯೋ ವಿರುದ್ಧ ನಿರಂತರ ಗೆಲುವು ಎಂಬ ಘೋಷ ವಾಕ್ಯದೊಂದಿಗೆ ಆಯೋಜಿಸಲಾದ ಕಾರ್ಯಕ್ರದಲ್ಲಿ ವಿಟ್ಲ ಪಟ್ಟಣ ಪಂಚಾಯತ್‌ ಸ್ಥಾಯಿ ಸಮಿತಿ ಅಧ್ಯಕ್ಷ ಅಶೋಕ್‌ ಶೆಟ್ಟಿ ಭಾಗಿಯಾಗಿ ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕುವ ಮೂಲಕ ಚಾಲನೆ ನೀಡಿದರು.

ಕಾರ್ಯಕ್ರಮದಲ್ಲಿ ವಿಟ್ಲ ಪಟ್ಟಣ ಪಂಚಾಯತ್‌ ಅಧ್ಯಕ್ಷ ಕರುಣಾಕರ ನಾಯ್ತೊಟ್ಟು, ಕೌನ್ಸಿಲರ್‌ ಹರೀಶ್‌, ಪಂಚಾಯತ್‌ ಸದಸ್ಯ ಹರೀಶ್‌ ಸಿ ಎಚ್‌, ವೈದ್ಯರು, ಆರೋಗ್ಯ ಇಲಾಖೆ ಸಿಬ್ಬಂಧಿಗಳು, ಆಶಾಕಾರ್ಯಕರ್ತೆಯರು, ಸೇರಿದಂತೆ ಹಲವರು ಉಪಸ್ಥಿತರಿದ್ದರು.

- Advertisement -

Related news

error: Content is protected !!