Friday, April 26, 2024
spot_imgspot_img
spot_imgspot_img

ಪುಲ್ವಾಮಾದಲ್ಲಿ ಪೊಲೀಸ್ ಠಾಣೆಯ ಮೇಲೆ ಗ್ರೇನೆಡ್ ದಾಳಿ

- Advertisement -G L Acharya panikkar
- Advertisement -

ಶ್ರೀನಗರ,ನ(13): ಜಮ್ಮು ಕಾಶ್ಮೀರದ ಪುಲ್ವಾಮಾದಲ್ಲಿ ಭಯೋತ್ಪಾದಕರು ಪೊಲೀಸ್ ಠಾಣೆಯ ಮೇಲೆ ಗ್ರೇನೆಡ್ ದಾಳಿ ನಡೆಸಿದ್ದಾರೆ. ಘಟನೆಯಲ್ಲಿ ಯಾರಿಗೂ ಗಾಯಗಳಾಗಿಲ್ಲ ಎಂದು ವರದಿಯಾಗಿದೆ. ಭಯೋತ್ಪಾದಕರಿಗಾಗಿ ಶೋಧ ಕಾರ್ಯ ಮುಂದುವರಿದಿದೆ.

ಇದೇ ವೇಳೆ ಖನ್ಯಾರ್ ಎಂಬಲ್ಲಿ ಕೇಂದ್ರ ಮೀಸಲು ಪೊಲೀಸ್ ಪಡೆಯ ಬಂಕರ್ ಮೇಲೂ ಭಯೋತ್ಪಾದಕರು ದಾಳಿ ನಡೆಸಿದ್ದಾರೆ ಎಂದು ವರದಿಯಾಗಿದೆ.

ಕಾಶ್ಮೀರ ಕಣಿವೆಯಲ್ಲಿ ಭಯೋತ್ಪಾದಕರ ಅಡಗುತಾಣಗಳನ್ನು ಪತ್ತೆ ಹಚ್ಚಿ ಭದ್ರತಾಪಡೆಗಳು ಕಾರ್ಯಾಚರಣೆ ನಡೆಸುತ್ತಿದ್ದು, ಇದು ಉಗ್ರ ಸಂಘಟನೆಗಳಿಗೆ ನಡುಕ ಸೃಷ್ಟಿಸಿದೆ. ದೀಪಾವಳಿ ವೇಳೆ ಭಯೋತ್ಪಾದಕರು ಭಾರಿ ದಾಳಿ ನಡೆಸುವ ಸಾಧ್ಯತೆ ಯಿದೆ ಎಂಬ ವರದಿ ಹಿನ್ನೆಲೆಯಲ್ಲಿ ಶ್ರೀನಗರ ಸೇರಿದಂತೆ ಜಮ್ಮು ಕಾಶ್ಮೀರದಲ್ಲಿ ಭದ್ರತಾ ವ್ಯವಸ್ಥೆ ಬಿಗಿಗೊಳಿಸಲಾಗಿದೆ.

- Advertisement -

Related news

error: Content is protected !!