- Advertisement -
- Advertisement -
ವರದಿ: ನ್ಯೂಸ್ ಡೆಸ್ಕ್, ವಿ ಟಿವಿ
ಮುಂಬೈ: ಮಹಾರಾಷ್ಟ್ರದಲ್ಲಿ ಕೊರೊನಾ ವೈರಸ್ ಹಾವಳಿ ಮಿತಿ ಮೀರಿದೆ. ಅದರಲ್ಲೂ ಪುಣೆಯಲ್ಲಿ ಸೋಂಕಿತರ ಸಂಖ್ಯೆ ಭಾರೀ ಏರಿಕೆಯಾಗಿದೆ. ಹೀಗಾಗಿ ಜುಲೈ 13 ರಿಂದ 23ರವರೆಗೆ ಪುಣೆಯಲ್ಲಿ ಸಂಪೂರ್ಣ ಲಾಕ್ ಡೌನ್ ಮಾಡಲು ಅಲ್ಲಿನ ಸರ್ಕಾರ ಮುಂದಾಗಿದೆ.
ಪುಣೆ ಮತ್ತು ನೆರೆಯ ಪ್ರಿಂಪ್ರಿ-ಚಿಂಚಿವಾಡ್ ಜಿಲ್ಲೆಗಳನ್ನು ಸಂಪೂರ್ಣ ಲಾಕ್ ಮಾಡಲು ಮಹಾರಾಷ್ಟ್ರ ಸರ್ಕಾರ ನಿರ್ಧರಿಸಿದೆ. ಲಾಕ್ ಡೌನ್ ಸಂದರ್ಭದಲ್ಲಿ ಅಗತ್ಯ ಸೇವೆಯನ್ನು ಹೊರತುಪಡಿಸಿ ಉಳಿದೆಲ್ಲಾ ಸೇವೆಗಳು ಬಂದ್ ಆಗಲಿದೆ ಎಂದು ತಿಳಿಸಿದೆ.
ಮಹಾರಾಷ್ಟ್ರದಲ್ಲಿ ಅತೀ ಹೆಚ್ಚು ಮಂದಿ ಸೋಂಕಿತರು ಇದ್ದಾರೆ. ಕೊರೊನಾ ಸೋಂಕಿತರ ಪೈಕಿ ಶೇ.40ರಷ್ಟು ಮಂದಿ ಮಹಾರಾಷ್ಟ್ರದಲ್ಲಿ ಇದ್ದಾರೆ. ಹೀಗಾಗಿ ಮಹಾರಾಷ್ಟ್ರ ಸರ್ಕಾರ ಲಾಕ್ ಡೌನ್ ಮಾಡಲು ನಿರ್ಧರಿಸಿದೆ.
- Advertisement -