Monday, July 6, 2026
spot_imgspot_img
spot_imgspot_img

ಪುಣೆ: ಭೂಕುಸಿತದಲ್ಲಿ ಮೂವರು ಮೃತ್ಯು: ಮುಂಬೈ-ಪುಣೆ ಹೆದ್ದಾರಿಯಲ್ಲಿ ಭಾರಿ ಸಂಚಾರ ದಟ್ಟಣೆ

- Advertisement -
- Advertisement -

ಪುಣೆ: ಮಹಾರಾಷ್ಟ್ರದಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಪುಣೆಯಲ್ಲಿ ಭೂಕುಸಿತ ಸಂಭವಿಸಿದ್ದು, ಈ ಘಟನೆಯಲ್ಲಿ ನೆಲಸಮಗೊಂಡ ಮನೆಗಳ ಅವಶೇಷಗಳಡಿ ಸಿಲುಕಿ ಒಂದೇ ಕುಟುಂಬದ ಮೂವರು ಮೃತಪಟ್ಟಿರುವ ಘಟನೆ ವರದಿಯಾಗಿದೆ.

ಈ ಘಟನೆಯಿಂದ ಮುಂಬೈ-ಪುಣೆ ಎಕ್ಸ್ ಪ್ರೆಸ್ ಹೆದ್ದಾರಿ ಹಾಗೂ ಹಳೆಯ ಮುಂಬೈ ಪುಣೆ ಹೆದ್ದಾರಿಯಲ್ಲಿ ಭಾರಿ ಸಂಚಾರ ದಟ್ಟಣೆಯುಂಟಾಗಿದ್ದು, ಈ ಎರಡು ನಗರಗಳನ್ನು ಸಂಪರ್ಕಿಸುವ ಪ್ರಮುಖ ರಸ್ತೆಗಳಲ್ಲಿನ ವಾಹನ ಸಂಚಾರವನ್ನು ಅಧಿಕಾರಿಗಳು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದ್ದಾರೆ.

ಭೂಕುಸಿತ ಘಟನೆಯಲ್ಲಿ ಮೃತಪಟ್ಟವರನ್ನು ನಂದು ಟಿಕೋಣೆ (60), ಮೌಲಿ ಟಿಕೋಣೆ (30) ಹಾಗೂ ಅನಿತಾ ಟಿಕೋಣೆ (55) ಎಂದು ಗುರುತಿಸಲಾಗಿದೆ. ಮಾವಲ್ ಪೆನ್ಸಿಲ್ ನ ಪಟನ್ ಗ್ರಾಮದಲ್ಲಿನ ಗುಡ್ಡ ಕುಸಿದು ಬಿದ್ದ ಪರಿಣಾಮ, ಐದು ಮನೆಗಳು ಕುಸಿದಿದ್ದವು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಸೋಮವಾರ ಮುಂಜಾನೆ ಸುಮಾರು 4.25ರ ವೇಳೆಗೆ ಬೆಟ್ಟದ ಭಾಗವೊಂದು ಗ್ರಾಮದಲ್ಲಿನ ಮನೆಗಳ ಮೇಲೆ ಕುಸಿದು ಬಿದ್ದಿದೆ ಎಂದು ತಿಳಿದು ಬಂದಿದೆ.

- Advertisement -

Related news

error: Content is protected !!