Sunday, May 5, 2024
spot_imgspot_img
spot_imgspot_img

ಗೂಂಡಾ ಕಾಯ್ದೆಯಡಿ ಪುನೀತ್‌ ಕೆರೆಹಳ್ಳಿ ಸಿಸಿಬಿ ಪೊಲೀಸರ ವಶಕ್ಕೆ

- Advertisement -G L Acharya panikkar
- Advertisement -

ಬೆಂಗಳೂರು: ರಾಷ್ಟ್ರ ರಕ್ಷಣಾ ಪಡೆ ಅಧ್ಯಕ್ಷ‌ ಪುನೀತ್‌ ಕೆರೆಹಳ್ಳಿ ವಿರುದ್ಧ ಗೂಂಡಾ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದ್ದು, ಸಿಸಿಬಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕಳೆದ ಹತ್ತು ವರ್ಷಗಳಲ್ಲಿ ಸಮಾಜದಲ್ಲಿ ಸಾಮರಸ್ಯ ಕದಡುವ, ಸಮಾಜ ವಿರೋಧ ಕಾರ್ಯಗಳ, ಅಪರಾಧ ಪಕರಣಗಳನ್ನು ಆಧರಿಸಿ ಪುನೀತ್ ಕೆರೆಹಳ್ಳಿ ವಿರುದ್ಧ ಗೂಂಡಾ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ ಎಂದು ವರದಿಯಾಗಿದೆ. ‘ಪುನೀತ್ ವಿರುದ್ಧ ರಾಜ್ಯದ 11 ಠಾಣೆಗಳಲ್ಲಿ‌ ಎಫ್‌ಐಆರ್ ದಾಖಲಾಗಿತ್ತು. ಕೆಲ ಪ್ರಕರಣಗಳಲ್ಲಿ ಶಿಕ್ಷೆಯೂ ಆಗಿತ್ತು.

ಬೆಂಗಳೂರಿನ ಜೆಪಿ ನಗರ ನಿವಾಸಿಯಾಗಿರುವ ಈತ, ಮೂಲತಃ ಹಾಸನದವನು.ರಾಷ್ಟ್ರ ರಕ್ಷಣಾ ಪಡೆ ಎಂಬ ಸಂಘಟನೆಯನ್ನು ಕಟ್ಟಿಕೊಂಡು ಜನರನ್ನು ಬೆದರಿಸುವ, ಸಮಾಜದ ಶಾಂತಿ ಕದಡುವ,ಗೋ ರಕ್ಷಣೆ ಹೆಸರಿನಲ್ಲಿ ವ್ಯಾಪಾರಿಗಳನ್ನು ಬೆದರಿಸುವ ಕಾರ್ಯಗಳಲ್ಲಿ ತೊಡಗಿದ್ದ ಎಂದು ಮಾಹಿತಿ ನೀಡಲಾಗಿದೆ.ಪುನೀತ್ ಕುಮಾರ್ ಯಾನೆ ಪುನೀತ್ ಕೆರೆಹಳ್ಳಿ ವಿರುದ್ಧ ರೌಡಿ ಪಟ್ಟಿ, ತೆರೆಯಲು ಪೊಲೀಸರು ಒಂದು ತಿಂಗಳು ಸಿದ್ಧತೆ ನಡೆಸಿದ್ದಾರೆ. ಈ ಬಗ್ಗೆ ಕಳೆದ ತಿಂಗಳು ಚಾಮರಾಜಪೇಟೆ ಉಪ ವಿಭಾಗದ ಪೊಲೀಸರು ಪುನೀತ್‌ಗೆ ತಿಳಿವಳಿಕೆ ನೋಟಿಸ್ ಜಾರಿ ಮಾಡಿದ್ದರು.

ಅಪರಾಧ ಪ್ರಕರಣಗಳಲ್ಲಿ‌ ಪದೇ ಪದೇ ಭಾಗಿಯಾಗುತ್ತಿರುವುದರಿಂದ ಪುನೀತ್‌ ವಿರುದ್ಧ ಗೂಂಡಾ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ’ ಎಂದು ಸಿಸಿಬಿ‌ ಮೂಲಗಳು ಹೇಳಿವೆ.

- Advertisement -

Related news

error: Content is protected !!