- Advertisement -
- Advertisement -



ಸಚಿವ ಜಮೀರ್ ಅಹ್ಮದ್ ಖಾನ್ ವಿರುದ್ಧ ನಿಂದನೆ ಮಾಡಿದ ಆರೋಪದ ಮೇರೆಗೆ ಹಿಂದೂ ಪರ ಕಾರ್ಯಕರ್ತ ಪುನೀತ್ ಕೆರೆಹಳ್ಳಿ ವಿರುದ್ಧ ಎಫ್ ಐಆರ್ ದಾಖಲಾಗಿದೆ ಎಂದು ತಿಳಿದುಬಂದಿದೆ.
ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿರುದ್ಧ ಜಮೀರ್ ಅಹ್ಮದ್ ‘ಕಾಲಿಯಾ’ ಪದ ಬಳಕೆ ಮಾಡಿದ್ದು ರಾಜ್ಯಾದ್ಯಂತ ಕಿಡಿ ಹೊತ್ತಿಸಿದೆ. ಇದೇ ವಿಚಾರವಾಗಿ ಪುನೀತ್ ಕೆರೆಹಳ್ಳಿ ಜಮೀರ್ ಅಹ್ಮದ್ ವಿರುದ್ಧ ಧರ್ಮ, ಜಾತಿ ಹೆಸರಿನಲ್ಲಿ ನಿಂದನೆ ಆರೋಪ ಮಾಡಿದ್ದು, ಹೀಗಾಗಿ ಅವರ ವಿರುದ್ಧ ಇದೀಗ ಎಫ್ಐಆರ್ ದಾಖಲಿಸಲಾಗಿದೆ.
ಧರ್ಮ ಧರ್ಮಗಳ ನಡುವೆ ಸಂಘರ್ಷ ಸೃಷ್ಟಿಸುವ ಹೇಳಿಕೆ ನೀಡಿದ್ದಾರೆ. ಅವಾಚ್ಯ ಶಬ್ದಗಳಿಂದ ನಿಂದಿದ್ದು, ಜೊತೆಗೆ ಪ್ರಾಣ ಬೆದರಿಕೆ ಕೂಡ ಹಾಕಿದ್ದಾರೆ. ಹಾಗಾಗಿ ಕೂಡಲೇ ಎಫ್ಐಆರ್ ದಾಖಲಿಸಿ ಕಾನೂನು ಕ್ರಮ ಕೈಗೊಳ್ಳುವಂತೆ ಎಂದು ಜಮೀರ್ ಅಹ್ಮದ್ ಆಪ್ತ ಕಾರ್ಯದರ್ಶಿ ದೂರಿನಲ್ಲಿ ಉಲ್ಲೇಖಿಸಿದ್ದರು.
- Advertisement -








