Thursday, April 25, 2024
spot_imgspot_img
spot_imgspot_img

ಮುಂದುವರಿಯುತ್ತಿದೆ ಸಿಎಂಗಳ ರಾಜೀನಾಮೆ ಪರ್ವ; ಪಂಜಾಬ್ ಮುಖ್ಯಮಂತ್ರಿ ಸ್ಥಾನಕ್ಕೆ ಅಮರಿಂದರ್ ಸಿಂಗ್ ರಾಜೀನಾಮೆ!

- Advertisement -G L Acharya panikkar
- Advertisement -
driving

ಪಂಜಾಬ್: ಈ ಹಿಂದೆ ಕರ್ನಾಟಕದ ಮುಖ್ಯಮಂತ್ರಿ ಯಡಿಯೂರಪ್ಪ ರಾಜೀನಾಮೆ ಘೋಷಿಸಿದ್ದು ಬಳಿಕ ಗುಜರಾತ್ ಸಿಎಂ ವಿಜಯ್ ರೂಪಾನಿ ರಾಜೀನಾಮೆ ಘೋಷಿಸಿದ್ದರು. ಇದೀಗ ಪಂಜಾಬ್ ಸಿಎಂ ರಾಜೀನಾಮೆ ಸಲ್ಲಿಸಿದ್ದಾರೆ.

ಮಹತ್ವದ ಬೆಳವಣಿಗೆಯಲ್ಲಿ ಕಾಂಗ್ರೆಸ್ ಪಕ್ಷದ ಮುಖಂಡರು ಪಂಜಾಬ್ ಸಿಎಂ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸುವಂತೆ ಮುಖ್ಯಮಂತ್ರಿ ಅಮರಿಂದರ್ ಸಿಂಗ್ ಗೆ ರಾಜೀನಾಮೆ ಸಲ್ಲಿಸುವಂತೆ ಸೂಚಿಸಿತ್ತು. ಈ ಹಿನ್ನಲೆಯಲ್ಲಿ ಇಂದು ರಾಜ್ಯಪಾಲರನ್ನು ಭೇಟಿ ಮಾಡಿದಂತ ಅವರು, ತಮ್ಮ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.

ಪಂಜಾಬ್ ನಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಗೂ ಮುನ್ನ ಮುಖ್ಯಮಂತ್ರಿ ಕ್ಯಾಪ್ಟನ್ ಅಮರಿಂದರ್ ಸಿಂಗ್ ಅವರು ಶನಿವಾರ ರಾಜ್ಯಪಾಲ ಬನ್ವಾರಿಲಾಲ್ ಪುರೋಹಿತ್ ಅವರಿಗೆ ರಾಜೀನಾಮೆ ಸಲ್ಲಿಸಿದರು.

ಅಮರಿಂದರ್ ಸಿಂಗ್ ಅವರ ಮಗ ರಣಿಂದರ್ ಸಿಂಗ್ ಅವರು ತಮ್ಮ ಟ್ವಿಟರ್ ಹ್ಯಾಂಡಲ್ ನಲ್ಲಿ ಈ ಸುದ್ದಿಯನ್ನು ದೃಢಪಡಿಸಿದ್ದಾರೆ. ತಮ್ಮ ತಂದೆಯೊಂದಿಗೆ ರಾಜ್ ಭವನಕ್ಕೆ ಹೋಗುವುದಾಗಿ ತಿಳಿಸಿದ್ದು, ಅಲ್ಲಿ ಅವರು ರಾಜೀನಾಮೆ ಸಲ್ಲಿಸಲಿದ್ದಾರೆ ಎಂದು ಹೇಳಿದ್ದಾರೆ.

- Advertisement -

Related news

error: Content is protected !!