Saturday, June 20, 2026
spot_imgspot_img
spot_imgspot_img

ಪಂಜಾಬ್​​ ಬೌಲಿಂಗ್​ ದಾಳಿಗೆ ತತ್ತರಿಸಿದ ಆರ್‌ಸಿಬಿಗೆ ಹೀನಾಯ ಸೋಲು.

- Advertisement -
- Advertisement -

ದುಬೈ: ಐಪಿಎಲ್​ ಟೂರ್ನಿಯ 6ನೇ ಪಂದ್ಯದಲ್ಲಿ ಬ್ಯಾಟಿಂಗ್​ ಹಾಗೂ ಬೌಲಿಂಗ್​ನಲ್ಲಿ ಮಿಂಚು ಹರಿಸಿದ ಪಂಜಾಬ್​ ತಂಡ ರಾಯಲ್​​​ ಚಾಲೆಂಜರ್ಸ್​ ಬೆಂಗಳೂರು ಎದುರು 97 ರನ್​ಗಳ ಭರ್ಜರಿ ಜಯ ಸಾಧಿಸಿತು.

ಪಂಜಾಬ್​ ನೀಡಿದ್ದ 207 ರನ್​ಗಳ ಗುರಿ ಬೆನ್ನತ್ತಿದ ಆರ್​ಸಿಬಿ ಕೇವಲ 10 ಓವರ್​ಗಳಲ್ಲಿ ತನ್ನೆಲ್ಲಾ ವಿಕೆಟ್​ ಕಳೆದುಕೊಂಡು ಕೇವಲ 109 ರನ್​ ಕಲೆಹಾಕುವ ಮೂಲಕ ಪಂದ್ಯವನ್ನು ಸೋತಿತ್ತು.

ಮೊದಲು ಟಾಸ್ ಸೋತು ಬ್ಯಾಟಿಂಗ್ ಮಾಡಿದ ಪಂಜಾಬ್, ರಾಹುಲ್ ಅವರು ಸೂಪರ್ ಶತಕದ ನೆರವಿನಿಂದ ನಿಗದಿತ 20 ಓವರಿನಲ್ಲಿ ಭರ್ಜರಿ 206 ರನ್ ಸೇರಿಸಿತು. ಈ ದೊಡ್ಡ ಮೊತ್ತವನ್ನು ಬೆನ್ನಟ್ಟಿದ ಕೊಹ್ಲಿ ಪಡೆ ಆರಂಭದಲ್ಲೇ ಮುಗ್ಗರಿಸಿತು.



ಪಂಜಾಬ್ ಪರವಾಗಿ ಉತ್ತಮವಾಗಿ ಬೌಲ್ ಮಾಡಿದ ರವಿ ಬಿಷ್ಣೋಯ್ ನಾಲ್ಕು ಓವರ್ ಬೌಲ್ ಮಾಡಿ ಮೂರು ವಿಕೆಟ್ ಕಿತ್ತು 21 ರನ್ ನೀಡಿದರು. ಶೆಲ್ಡನ್ ಕಾಟ್ರೆಲ್ ಅವರು ಮೂರು ಓವರ್ ಬೌಲ್ ಮಾಡಿ ಎರಡು ವಿಕೆಟ್ ಕಿತ್ತು, ಕೇವಲ 17 ರನ್ ನೀಡಿದರು. ಇವರಿಗೆ ಉತ್ತಮ ಸಾಥ್ ಕೊಟ್ಟ ಮೊಹಮ್ಮದ್ ಶಮಿ ಮೂರು ಓವರ್ ಬೌಲ್ ಮಾಡಿ 14 ರನ್ ನೀಡಿ ಒಂದು ವಿಕೆಟ್ ಪಡೆದರು.

- Advertisement -

Related news

error: Content is protected !!