Thursday, June 18, 2026
spot_imgspot_img
spot_imgspot_img

ಲೋಕಸಭಾ ಚುನಾವಣಾ ಅಖಾಡಕ್ಕೆ ಪುತ್ತಿಲ ಸ್ಪರ್ಧೆ ಖಚಿತ ..!!

- Advertisement -
- Advertisement -

ಪುತ್ತೂರು: ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಹಿಂದೂ ಫೈರ್ ಬ್ರಾಂಡ್ ಅರುಣ್ ಕುಮಾರ್ ಪುತ್ತಿಲ ಮತ್ತೆ ಕಣಕ್ಕಿಳಿಯಲಿದ್ದಾರೆ.

ಬಿಜೆಪಿಯ ಟಿಕೇಟ್ ಆಕಾಂಕ್ಷಿಯಾಗಿರುವ ಅರುಣ್ ಕುಮಾರ್ ಪುತ್ತಿಲ ಅವರು ವಿಧಾನಸಭಾ ಚುನಾವಣೆಯಲ್ಲಿ ಸಣ್ಣ ಮತಗಳ ಅಂತರದಿಂದ ಸೋಲನ್ನು ಹೊಂದಿದರೂ, ರಾಜ್ಯ ರಾಜಕಾರಣವೇ ಹಿಂದಿರುಗಿ ನೋಡುವಂತೆ ಮಾಡಿದ್ದರು. ಇದೀಗ ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಮತ್ತೊಮ್ಮೆ ಪುತ್ತಿಲ ಸ್ಪರ್ಧೆಯ ವಿಚಾರ ಬಂದಿದೆ.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅಧ್ಯಕ್ಷ ಪ್ರಸನ್ನ ಕುಮಾರ್ ಮಾರ್ತ… ಲೋಕಸಭಾ ಚುನಾವಣಾ ಅಖಾಡಕ್ಕೆ ಪುತ್ತಿಲ ಸ್ಪರ್ಧೆ ಖಚಿತ , ಪುತ್ತೂರು ಸಹಿತ ಜಿಲ್ಲೆಯಾದ್ಯಂತ ನಮ್ಮ ಪರಿವಾರ ಕೆಲಸ ಮಾಡುತ್ತಿದೆ. ರಾಜ್ಯಾದ್ಯಂತ ಪುತ್ತಿಲ ಪರಿವಾರ ವಿಸ್ತರಿಸಲಿದ್ದೇವೆ ಎಂದರು.

ಕೊಟೇಚಾದಲ್ಲಿ ನಡೆದ ಸಭೆಯಲ್ಲಿ ತೀರ್ಮಾನಿಸಿದಂತೆ, ಮುಂದಿನ ಎಲ್ಲಾ ಚುನಾವಣೆಯಲ್ಲಿ ನಮ್ಮ ಸ್ಪರ್ಧೆ ಖಚಿತ. ಮುಂದಿನ ಎಲ್ಲಾ ಚುನಾವಣೆಯಲ್ಲಿ ಪುತ್ತಿಲ ಪರಿವಾರ ಸ್ಪರ್ಧಿಸಲಿದೆ.ನಮ್ಮ ಕಾರ್ಯಕರ್ತರ, ಮತದಾರರ ರಕ್ಷಣೆ ನಮ್ಮ ಹೊಣೆ ಎಂದರು. ಪುತ್ತಿಲ ಪರಿವಾರದ ವಕ್ತಾರರಾದ ಶ್ರೀಕೃಷ್ಣ ಉಪಾಧ್ಯಾಯ, ನಗರ ಅಧ್ಯಕ್ಷರಾದ ಅನಿಲ್ ತೆಂಕಿಲ, ಉಪಾಧ್ಯಕ್ಷರಾದ ಮಹೇಂದ್ರ ವರ್ಮ ವೇದಿಕೆಯಲ್ಲಿ ಉಪಸ್ಥಿತರಿದ್ದರು.

- Advertisement -

Related news

error: Content is protected !!