Wednesday, June 24, 2026
spot_imgspot_img
spot_imgspot_img

ಪುತ್ತೂರು: ಅಕ್ರಮ ಪ್ರವೇಶ ಮಾಡಿ ಕಟ್ಟಡ ಧ್ವಂಸ-ಪಂಜಿಗುಡ್ಡೆ ಈಶ್ವರ ಭಟ್ ಹಾಗೂ ಇತರರ ವಿರುದ್ದ ಪ್ರಕರಣ ದಾಖಲು

- Advertisement -
- Advertisement -

ಪುತ್ತೂರು: ಪುತ್ತೂರು ಮುಖ್ಯ ರಸ್ತೆಯ ಬದಿಯಲ್ಲಿರುವ ಹಳೆಯ ಕಟ್ಟಡ ಮತ್ತು ಜಮೀನಿಗೆ ಅಕ್ರಮವಾಗಿ ಪ್ರವೇಶಿಸಿ ಕಟ್ಟಡವನ್ನು ಧ್ವಂಸಗೊಳಿಸಿದ ಆರೋಪದ ಹಿನ್ನೆಲೆಯಲ್ಲಿ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಂಗಳೂರು ಕದ್ರಿಹಿಲ್ಸ್ ನಿವಾಸಿ ಡಾ. ಅರವಿಂದ ರಾವ್ ಕೇದಿಗೆ ಅವರ ದೂರಿನಂತೆ, ಮಾನ್ಯ ಸಿಜೆ ಮತ್ತು ಜೆಎಂಎಫ್‌ಸಿ ಬಂಟ್ವಾಳ ನ್ಯಾಯಾಲಯದ ಆದೇಶದ ಮೇರೆಗೆ ದೂರುದಾರರ ಸುಪರ್ಧಿಯಲ್ಲಿದ್ದ ಆಸ್ತಿ ಮೇಲೆ ಈ ಘಟನೆ ನಡೆದಿದೆ ಎಂದು ತಿಳಿದುಬಂದಿದೆ.

ದೂರಿನ ಪ್ರಕಾರ, ಪುತ್ತೂರಿನ ದೇವಸ್ಥಾನದ ಪದಾಧಿಕಾರಿಗಳಾದ ಈಶ್ವರ ಭಟ್ ಪಂಜಿಗುಡ್ಡೆ ಹಾಗೂ ಇತರರು ದಿನಾಂಕ 14-04-2026ರ ರಾತ್ರಿ ವೇಳೆ ಅಕ್ರಮವಾಗಿ ಪ್ರವೇಶಿಸಿ, ಜಮೀನಿನಲ್ಲಿದ್ದ ಹಳೆಯ ಕಟ್ಟಡವನ್ನು ಕೆಡವಿರುವುದಾಗಿ ಆರೋಪಿಸಲಾಗಿದೆ.
ಈ ಸಂಬಂಧ ದಿನಾಂಕ 17-04-2026ರಂದು ನೀಡಲಾದ ದೂರಿನ ಮೇರೆಗೆ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಅ.ಕ್ರ. 44/2026 ಪ್ರಕರಣವನ್ನು ಭಾರತೀಯ ನ್ಯಾಯ ಸಂಹಿತೆ (BNS) 2023ರ ಕಲಂ 329(3), 324(2) ಹಾಗೂ 3(5) ಅಡಿಯಲ್ಲಿ ದಾಖಲಿಸಿಕೊಂಡು ತನಿಖೆ ಕೈಗೊಳ್ಳಲಾಗಿದೆ.
ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.

- Advertisement -

Related news

error: Content is protected !!