Tuesday, December 3, 2024
spot_imgspot_img
spot_imgspot_img

ಲೋಕಸಭಾ ಚುನಾವಣೆಗೆ ಪುತ್ತಿಲ ಸ್ಪರ್ಧೆ – ಬಿಜೆಪಿಗೆ ಎದುರಾಳಿಯ ಪ್ರಶ್ನೆಯೇ ಇಲ್ಲ: ನಳೀನ್ ಕುಮಾರ್ ಕಟೀಲ್

- Advertisement -
- Advertisement -

ಮಂಗಳೂರು : ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಿಂದ ಪುತ್ತಿಲ ಪರಿವಾರದಿಂದ ಅರುಣ್ ಪುತ್ತಿಲ ಅವರು ಸ್ಪರ್ಧೆ ಮಾಡಿದರೆ ಮಾಡಲಿ. ಅವರದ್ದೊಂದು ಸ್ವತಂತ್ರ ಸಂಸ್ಥೆಯಾಗಿದೆ. ಬಿಜೆಪಿಗೆ ಯಾವುದೇ ಎದುರಾಳಿಯಿಲ್ಲ. ಈ ಬಾರಿ ಅತ್ಯಂತ ಹೆಚ್ಚು ಅಂತರದಿಂದ ಗೆಲುವು ಸಾಧಿಸುತ್ತೇನೆ ಎಂದು ಸಂಸದ ನಳೀನ್ ಕುಮಾರ್ ಕಟೀಲ್ ಹೇಳಿದ್ದಾರೆ.ಇದು ಪ್ರಜಾಪ್ರಭುತ್ವ, ಚುನಾವಣೆಗೆ ಸ್ಪರ್ಧಿಸುವ ಹಕ್ಕು ಎಲ್ಲರಿಗೂ ಇದೆ. ಪ್ರತೀ ಚುನಾವಣೆ ಬಂದಾಗ ಹತ್ತಾರು ಸಮಸ್ಯೆಗಳು ಉದ್ಭವವಾಗುತ್ತದೆ. ಆ ಎಲ್ಲಾ ಸವಾಲುಗಳನ್ನು ಬಿಜೆಪಿ ಗೆದ್ದು ಗೆಲುವು ಸಾಧಿಸಿದೆ ಎಂದು ಹೇಳಿರುವ ಸಂಸದ ನಳಿನ್ ಕುಮಾರ್ ಕಟೀಲ್ ಮುಂಬರುವ ಚುನಾವಣೆಯಲ್ಲಿ ಗೆಲುವಿನ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಮಂಗಳೂರಿನಲ್ಲಿ ಪುತ್ತಿಲ ಪರಿವಾರದಿಂದ ಅರುಣ್ ಕುಮಾರ್ ಪುತ್ತಿಲ ಪಕ್ಷೇತರ ಸ್ಪರ್ಧೆ ವಿಚಾರದ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪುತ್ತಿಲ ಪರಿವಾರ ಒಂದು ಸ್ವತಂತ್ರ ಸಂಸ್ಥೆಯಾಗಿದೆ. ಆ ಸಂಸ್ಥೆಗೆ ತೀರ್ಮಾನ ತೆಗೆದುಕೊಳ್ಳುವ ಸ್ವಾತಂತ್ರ್ಯ ಇದೆ. ಈಗಾಗಲೇ ಅವರ ಮನವೊಲಿಕೆಗೆ ಪಾರ್ಟಿ ಪ್ರಯತ್ನ ಮಾಡಿದೆ. ಭಾರತೀಯ ಜನತಾ ಪಾರ್ಟಿ (ಬಿಜೆಪಿ) ಬಹಳ ವರ್ಷಗಳ ಹೋರಾಟದಿಂದ ಅತೀ ದೊಡ್ಡ ಪಾರ್ಟಿಯಾಗಿ ಬೆಳೆದಿದೆ. ರಾಷ್ಟ್ರೀಯ ಪಕ್ಷ ಕಾಂಗ್ರೆಸ್‌ ನ್ನು ಎದುರಿಸಿ ಲೋಕಸಭೆಯಲ್ಲಿ ಅತೀ ಹೆಚ್ಚು ಸೀಟು ಗೆದ್ದಿದೆ. ಹಾಗಾಗಿ, ಪಕ್ಷಕ್ಕೆ ಎದಯರಾಳಿಯ ಪ್ರಶ್ನೆ ಇಲ್ಲ ಎಂದು ತಿರುಗೇಟು ನೀಡಿದ್ದಾರೆ.

ರಾಮಮಂದಿರ ನಿರ್ಮಾಣವಾದ ಬಳಿಕ ಬಿಜೆಪಿ ಪರವಾದ ವಾತಾವರಣ ಅದ್ಭುತವಾಗಿದೆ. ಹಿಂದುತ್ವ, ರಾಷ್ಟ್ರವಾದ, ಅಭಿವೃದ್ಧಿ ವಿಚಾರವಾಗಿ ಜನ ಒಗ್ಗಟ್ಟಾಗುತ್ತಾರೆ. ವಿಧಾನಸಭಾ ಚುನಾವಣೆಗೂ ಲೋಕಸಭಾ ಚುನಾವಣೆಗೂ ವ್ಯತ್ಯಾಸ ಇದೆ. ಆಗಿನ ವಿಚಾರವೇ ಬೇರೆ, ಈಗಿನ ವಿಚಾರವೇ ಬೇರೆ. ಈ ಬಾರಿಯ ಚುನಾವಣೆಯಲ್ಲಿ ಭಾರತೀಯ ಜನತಾ ಪಾರ್ಟಿ ಅಭೂತಪೂರ್ವ ಗೆಲುವು ಪಡೆಯುತ್ತದೆ ಎಂದು ಕಟೀಲ್ ಹೇಳಿದ್ದಾರೆ. ಕೊನೆಯಲ್ಲಿ ಪತ್ರಕರ್ತರೊಬ್ಬರ ಪ್ರಶ್ನೆಗೆ ಉತ್ತರಿಸಿದ ಅವರು, ಸೀಟ್ ಕೋಡೊದು ಬಿಡೋದು ರಾಷ್ಟ್ರೀಯ ನಾಯಕರು ತೀರ್ಮಾನ. ಆ ತೀರ್ಮಾನಕ್ಕೆ ಕಾರ್ಯಕರ್ತನಾಗಿ ಬದ್ಧನಾಗಿದ್ದೇನೆ ಎಂದು ಸಂಸದ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.

- Advertisement -

Related news

error: Content is protected !!