Tuesday, April 23, 2024
spot_imgspot_img
spot_imgspot_img

ಪುತ್ತೂರು: ವಿಜೃಂಭಣೆಯಿಂದ ನಡೆದ ಪುತ್ತೂರು ಮೊಸರು ಕುಡಿಕೆ ಉತ್ಸವ ಮತ್ತು ಶೋಭಾಯಾತ್ರೆ

- Advertisement -G L Acharya panikkar
- Advertisement -

ಪುತ್ತೂರು : ವಿಶ್ವ ಹಿಂದು ಪರಿಷತ್ ಮತ್ತು ಪುತ್ತೂರು ಮೊಸರು ಕುಡಿಕೆ ಉತ್ಸವ ಸಮಿತಿ ವಿಶ್ವ ಹಿಂದು ಪರಿಷತ್‌ನ ಸ್ಥಾಪನಾ ದಿನಾಚರಣೆಯ ಅಂಗವಾಗಿ 12ನೇ ವರ್ಷದ ಮೊಸರು ಕುಡಿಕೆ ಉತ್ಸವ ಮತ್ತು ಶೋಭಾಯಾತ್ರೆಯು ಬಹಳ ವಿಜೃಂಭಣೆಯಿಂದ ನಡೆಯಿತು.

ವೀರ ಹಿಂದು ಯುವಕರಿಂದ ಅಟ್ಟಿ ಮಡಿಕೆ ಹೊಡೆಯುವ ಸಾಹಸಮಯ ಸ್ಪರ್ಧೆ ಶೋಭಾಯಾತ್ರೆಯೊಂದಿಗೆ ಶ್ರೀ ಆಂಜನೇಯ ಮಂತ್ರಾಲಯ, ಬೊಳುವಾರಿನಲ್ಲಿ ನಡೆಯಿತು. ಉದ್ಘಾಟನೆಯನ್ನು ಡಾ| ಸುರೇಶ್ ಮತ್ತೂರಾಯ ಖ್ಯಾತ ವೈದ್ಯರು, ಪುತ್ತೂರು ನೆರವೇರಿಸಿದರು. ಧ್ವಜ ಹಸ್ತಾಂತರವನ್ನು ಬಜರಂಗದಳ ಪುತ್ತೂರು ಜಿಲ್ಲೆ ಸಂಯೋಜಕ ಭರತ್ ಕುಮೇಲು ನೆರವೇರಿಸಿದರು.

ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿ ಧಾರ್ಮಿಕ ಸಭಾ ಕಾರ್ಯಕ್ರಮ ನಡೆಯಲಿದೆ. ಕಾರ್ಯಕ್ರಮದ ಅಧ್ಯಕ್ಷತೆ ಯನ್ನು ಪುತ್ತೂರು ಮೊಸರು ಕುಡಿಕೆ ಉತ್ಸವದ ಅಧ್ಯಕ್ಷ ಪಿ. ವಾಮನ ಪೈ ವಹಿಸಲಿದ್ದಾರೆ. ಬಜರಂಗದಳ ಕರ್ನಾಟಕ ಪ್ರಾಂತ ಸಂಯೋಜಕ್ ಸುನೀಲ್ ಕೆ.ಆರ್ ಅವರು ದಿಕ್ಸೂಚಿ ಭಾಷಣ ಮಾಡಲಿದ್ದಾರೆ.

ಮುಖ್ಯ ಅತಿಥಿಗಳಾಗಿ ಚಲನಚಿತ್ರ ನಟ ಹಾಗೂ ರಾಜ್ಯಸಭಾ ಸದಸ್ಯ ಜಗ್ಗೇಶ್, ಖ್ಯಾತ ವೈದ್ಯ ಡಾ| ಎಂ.ಕೆ ಪ್ರಸಾದ್ ಪುತ್ತೂರು, ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೇಶವ ಪ್ರಸಾದ್ ಮುಳಿಯ, ಪೌರಕಾರ್ಮಿಕ ಮತ್ತು ಹೊರ ಗುತ್ತಿಗೆ ಸಂಘದ ಕರಾವಳಿ ಸಂಚಾಲಕ ಅಣ್ಣಪ್ಪ ಕಾರೆಕ್ಕಾಡು ಆಗಮಿಸಲಿದ್ದಾರೆ.

- Advertisement -

Related news

error: Content is protected !!