- Advertisement -
- Advertisement -




ಹಿಂದೂ ಮುಖಂಡ ಅಜಿತ್ ರೈ ಹೊಸಮನೆ ವಿರುದ್ಧ ಪುತ್ತಿಲ ಪರಿವಾರದ ಮನೀಶ್ ಕುಲಾಲ್ ತಂದೆ ಆನಂದ ಕುಲಾಲ್ ದಾಖಲಿಸಿದ ಪ್ರಕರಣಕ್ಕೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ.
ಪುತ್ತೂರು ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಪುತ್ತಿಲ ಪರಿವಾರ ಮತ್ತು ಬಿಜೆಪಿ ಕಾರ್ಯಕರ್ತರ ನಡುವೆ ಗಲಾಟೆ ಉಂಟಾಗಿ ಎರಡು ಕಡೆಯವರ ವಿರುದ್ಧ ಪುತ್ತೂರು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಬಿಜೆಪಿ ಕಾರ್ಯಕರ್ತ ಅಜಿತ್ ರೈ ಹೊಸಮನೆ ವಿರುದ್ಧ ಪುತ್ತಿಲ ಪರಿವಾರದ ಮನೀಶ್ ಕುಲಾಲ್ ಅವರ ತಂದೆ ಆನಂದ ಕುಲಾಲ್ ಮನೆಗೆ ಬಂದು ಬೆದರಿಕೆ ಹಾಕಿದನೆಂದು ದೂರು ನೀಡಿ ಪ್ರಕರಣ ದಾಖಲಾಗಿತ್ತು. ಇದೀಗ ಈ ಪ್ರಕರಣಕ್ಕೆ ಮಾನ್ಯ ಹೈ ಕೋರ್ಟ್ ತಡೆ ನೀಡಿದೆ. ಅಜಿತ್ ರೈ ಪರವಾಗಿ ಖ್ಯಾತ ನ್ಯಾಯವಾದಿಗಳಾದ ಮಹೇಶ್ ಕಜೆ ಮತ್ತು ಹೈಕೋರ್ಟ್ ನ್ಯಾಯವಾದಿ ಸುಯೋಗ್ ಹೇರಳೆ ವಾದಿಸಿದರು.
- Advertisement -