- Advertisement -
- Advertisement -




ಪುತ್ತೂರು: ಮಂಗಳೂರಿನಿಂದ ಹೊರಟಿದ್ದ ಕಣ್ಣೂರು ಎಕ್ಸ್’ಪ್ರೆಸ್’ನಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡಿದೆ. ಪರಿಣಾಮ ಪ್ರಯಾಣಿಕರು ಸುಮಾರು ಒಂದು ಗಂಟೆಗೂ ಹೆಚ್ಚು ಸಮಯ ಪರದಾಡುವ ಸ್ಥಿತಿ ನಿರ್ಮಾಣವಾಗಿದೆ ಎಂದು ತಿಳಿದುಬಂದಿದೆ.ಪುತ್ತೂರಿನಲ್ಲಿ ಕೆಟ್ಟು ನಿಂತ ಘಟನೆ ಭಾನುವಾರ ರಾತ್ರಿ ನಡೆದಿದೆ.ರಾತ್ರಿ 9.30ಕ್ಕೆ ಕಣ್ಣೂರು ಎಕ್ಸ್’ಪ್ರೆಸ್ ಪುತ್ತೂರು ರೈಲ್ವೇ ನಿಲ್ದಾಣಕ್ಕೆ ಆಗಮಿಸಿತ್ತು.
ಬೆಳಿಗ್ಗೆ 6ರ ಸುಮಾರಿಗೆ ಬೆಂಗಳೂರಿಗೆ ತಲುಪಬೇಕಿತ್ತು, ಆದರೆ ವಿಳಂಬವಾಗುವ ಸಾಧ್ಯತೆ ಇದೆ.ಪುತ್ತೂರಿನಿಂದ ಸುಮಾರು 1.ಕಿ.ಮೀ ಮುಂದೆ ಸಾಗಿದ ರೈಲು ಅಚಾನಕಾಗಿ ನಿಂತಿದೆ. ಸುಮಾರು 1 ಘಂಟೆಗಳ ಕಾಲ ಕೆಟ್ಟು ನಿಂತ ಬಳಿಕ ಪ್ರಯಾಣಿಕರಿಗೆ ಸಮಸ್ಯೆಯ ಬಗ್ಗೆ ತಿಳಿದು ಬಂದಿದೆ.ಸುಬ್ರಹ್ಮಣ್ಯದಿಂದ ರೈಲು ಇಂಜಿನ್ ತರಿಸಿಕೊಳ್ಳಲಾಗಿದೆ ಎಂದು ತಿಳಿದುಬಂದಿದೆ.
- Advertisement -








