Tuesday, June 16, 2026
spot_imgspot_img
spot_imgspot_img

ಪುತ್ತೂರು: ಸರ್ಕಾರಿ ಆಸ್ಪತ್ರೆ ವೈದ್ಯೆ ಡಾ.ಆಶಾ ಪುತ್ತೂರಾಯರಿಗೆ ಹಲ್ಲೆ ಪ್ರಕರಣ ಖಂಡಿಸಿ ಪ್ರತಿಭಟನೆ ಆರೋಪಿ ಬಂಧನವಾಗದಿದ್ದರೆ ಸೋಮವಾರ ಪುತ್ತೂರು ಬಂದ್ ಗೆ ಆಗ್ರಹ; ಪುತ್ತಿಲ

- Advertisement -
- Advertisement -

ಪುತ್ತೂರು: ಪುತ್ತೂರು ಸರಕಾರಿ ಆಸ್ಪತ್ರೆ ವೈದ್ಯಾಧಿಕಾರಿ ಮೇಲೆ ಅನುಚಿತ ವರ್ತನೆ ಹಾಗೂ ಹಲ್ಲೆಗೆ ಯತ್ನಿಸಿದ ಯುವಕನನ್ನು ಇಂದು ಸಂಜೆ 6 ಗಂಟೆ ಒಳಗೆ ಬಂಧಿಸಿದ್ದಲ್ಲಿ ತಾಲೂಕಿನ ಎಲ್ಲಾ ಆಸ್ಪತ್ರೆಗಳು ಬಂದ್ ಆಗಲಿದೆ ಎಂಬ ಎಚ್ಚರಿಕೆಯನ್ನು ಭಾರತೀಯ ವೈದ್ಯಕೀಯ ಸಂಘದ ಪುತ್ತೂರು ಶಾಖಾ ಎಚ್ಚರಿಕೆ ನೀಡಿದೆ.

ಪುತ್ತೂರು ಸರಕಾರಿ ಆಸ್ಪತ್ರೆಯ ವೈದ್ಯಾಧಿಕಾರಿಗಳ ಮೇಲೆ ವ್ಯಕ್ತಿಯೋರ್ವ ಅನುಚಿತ ವರ್ತನೆ, ಹಲ್ಲೆಗೆ ಯತ್ನಿಸಿದ ಘಟನೆ ಶುಕ್ರವಾರ ರಾತ್ರಿ ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ನಡೆದಿದ್ದು, ಈ ವೈದ್ಯರು ಹಾಗೂ ಬಿಜೆಪಿ ಶನಿವಾರ ಬೆಳಗ್ಗೆ ಪುತ್ತೂರು ಮಹಿಳಾ ಠಾಣೆಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿ ಈ ಎಚ್ಚರಿಕೆಯನ್ನು ನೀಡಿದೆ.

ಆರೋಪಿಯನ್ನು ಪೊಲೀಸರು ಬಂಧಿಸದೆ ಬಿಟ್ಟಿದ್ದಾರೆ ಎಂದು ಆರೋಪಿಸಿ ಭಾರತೀಯ ವೈದ್ಯಕೀಯ ಸಂಘದ ಪುತ್ತೂರು ಶಾಖೆಯ ಪದಾಧಿಕಾರಿಗಳು ವೈದ್ಯರು ಹಾಗೂ ಹಿಂದೂ ಮುಖಂಡ ಅರುಣ್‌ ಕುಮಾ‌ರ್ ಪುತ್ತಿಲರ ನೇತೃತ್ವದಲ್ಲಿ ರಾತ್ರಿ ಮಹಿಳಾ ಠಾಣೆ ಮುಂದೆ ಜಮಾಯಿಸಿದ್ದರು. ಆರೋಪಿಗಳನ್ನು ಬಂಧಿಸದೆ ಬಿಟ್ಟಿದ್ದರಿಂದ ಪೊಲೀಸರು ಹಾಗೂ ಅಲ್ಲಿ ನೆರೆದವರ ನಡುವೆ ಮಾತಿನ ಚಕಮಕಿ ನಡೆಯಿತು. ಪೊಲೀಸರಿಂದ ಪೂರಕ ಸ್ಪಂದನೆ ದೊರೆಯದ ಹಿನ್ನಲೆಯಲ್ಲಿ ಸಂಘಟನೆಯವರು ಪೊಲೀಸರ ವಿರುದ್ಧ ದಿಕ್ಕಾರ ಕೂಗಿದರು. ಈ ಸಂದರ್ಭದಲ್ಲಿ ಠಾಣಾ ಇನ್‌ಸ್ಪೆಕ್ಟರ್ ಜೋನ್ಸನ್‌ ಡಿ’ಸೋಜಾ ವೈದ್ಯಾಧಿಕಾರಿ ನೀಡಿದ ದೂರಿನಂತೆ ಪ್ರಕರಣ ದಾಖಲಿಸಿಕೊಂಡಿದ್ದೇವೆ ಎಂದು ತಿಳಿಸಿದರು. ನಾಳೆ ಬೆಳಿಗ್ಗೆ 8 ಗಂಟೆಯ ಒಳಗೆ ಬಂಧಿಸದಿದ್ದಲ್ಲಿ ಮತ್ತೆ ಪ್ರತಿಭಟನೆ ನಡೆಸುತ್ತೇವೆ ಎಂಬ ಎಚ್ಚರಿಕೆಯನ್ನು ನೀಡಿದ್ದಾರೆ.

- Advertisement -

Related news

error: Content is protected !!