- Advertisement -
- Advertisement -


ಪುತ್ತೂರು: ಇತಿಹಾಸ ಪ್ರಸಿದ್ದ ಮಹಾತೋಭಾರ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರಮಾರು ಗದ್ದೆಯಲ್ಲಿ 32ನೇ ವರ್ಷದ ಪುತ್ತೂರು ಕೋಟಿ-ಚೆನ್ನಯ ಜೋಡುಕರೆ ಕಂಬಳಕ್ಕೆ ಅದ್ಧೂರಿ ಚಾಲನೆ ನೀಡಲಾಯಿತು.
ಕಂಬಳದ ಉದ್ಘಾಟನೆಯನ್ನು ಶ್ರೀಮಹಾಲಿಂಗೇಶ್ವರ ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ, ಸಮಿತಿಯ ಕೋಶಾಧಿಕಾರಿ ಈಶ್ವರ ಭಟ್ ಪಂಜಿಗುಡ್ಡೆ ನೆರವೇರಿಸಿದರು. ಸವಣೂರು ವಿದ್ಯಾರಶ್ಮಿ ಶಿಕ್ಷಣ ಸಂಸ್ಥೆಗಳ ಸಂಚಾಲಕ ಕೆ ಸೀತಾರಾಮ ರೈ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ಕಾರ್ಯಕ್ರಮದಲ್ಲಿ ತಹಶೀಲ್ದಾರ್ ಪುರಂದರ ಹೆಗ್ಡೆ, ಕೋಟಿ ಚೆನ್ನಯ ಕಂಬಳ ಸಮಿತಿ ಅಧ್ಯಕ್ಷ ಎನ್. ಚಂದ್ರಹಾಸ ಶೆಟ್ಟಿ, ಮಾಜಿ ಶಾಸಕಿ ಶಕುಂತಲಾ ಶೆಟ್ಟಿ, ಸಂಚಾಲಕ ವಸಂತ ಕುಮಾರ್ ರೈ ದುಗ್ಗಳ, ಪ್ರಧಾನ ಕಾರ್ಯದರ್ಶಿ ದಿನೇಶ್ ಕುಲಾಲ್ ಪಿ. ವಿ, ಸುಧಾನ ಶಿಕ್ಷಣ ಸಂಸ್ಥೆಯ ವಿಜಯ ಹಾರ್ವಿನ್, ಸಂಜೀವ ಪೂಜಾರಿ ಕುರೆಲು, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೃಷ್ಣ ಪ್ರಸಾದ್ ಆಳ್ವ, ಶಿವರಾಮ ಆಳ್ವ, ರೋಶನ್ ರೈ ಬನ್ನೂರು, ಸುದೇಶ್ ಚಿಕ್ಕಪುತ್ತೂರು ಮತ್ತಿತ್ತರರು ಉಪಸ್ಥಿತರಿದ್ದರು.
- Advertisement -