Wednesday, August 5, 2026
spot_imgspot_img
spot_imgspot_img

ಪುತ್ತೂರು: ಸಾರ್ವಜನಿಕವಾಗಿ ತಲವಾರು ಪ್ರದರ್ಶನ -ಪ್ರಕರಣ ದಾಖಲು

- Advertisement -
- Advertisement -

ಪುತ್ತೂರು:ಪುತ್ತೂರು ಕಸ್ಬಾ ಗ್ರಾಮದ, ಬೊಳುವಾರು ಎಂಬಲ್ಲಿ, ಜ. 14ರಂದು ಮಧ್ಯಾಹ್ನ ವೇಳೆ ವ್ಯಕ್ತಿಯೋರ್ವ ತನ್ನ ಕೈಯಲ್ಲಿ ತಲವಾರನ್ನು ಹಿಡಿದುಕೊಂಡು ಸಾರ್ವಜನಿಕರಿಗೆ ತೋರಿಸುತ್ತಾ ಬೆದರಿಕೆ ಒಡ್ಡುತ್ತಿರುವುದಾಗಿ ಮಾಹಿತಿ ಬಂದ ಮೇರೆಗೆ, ಪುತ್ತೂರು ನಗರ ಠಾಣಾ ಪೊಲೀಸರು ಸ್ಥಳಕ್ಕೆ ತೆರಳಿ, ಆತನನ್ನು ಸಾರ್ವಜನಿಕರ ಸಹಾಯದಿಂದ ಹಿಡಿದು ವಿಚಾರಿಸಲಾಗಿದೆ. ಆರೋಪಿ ಹಾಸನ ಮೂಲದ ರಾಜು (45), ಎಂಬುದಾಗಿ ತಿಳಿದುಬಂದಿದೆ.

ಪ್ರಸ್ತುತ ಆರೋಪಿತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ. ಘಟನೆಯ ಬಗ್ಗೆ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಅ.ಕ್ರ: 59/2025, ಕಲಂ: 25(1B)(b) Indian Arms Act ಹಾಗೂ 110 ಬಿ.ಎನ್.ಎಸ್ ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ. ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪ್ರಕಟಣೆ ತಿಳಿಸಿದೆ.

- Advertisement -

Related news

error: Content is protected !!