Sunday, June 21, 2026
spot_imgspot_img
spot_imgspot_img

ಪುತ್ತೂರು: ಸುದಾನ ಪದವಿ ಪೂರ್ವ ಕಾಲೇಜು; ಶಿಕ್ಷಕ-ರಕ್ಷಕ ಸಂಘದ ಅಧ್ಯಕ್ಷರಾಗಿ ಕೆ.ಎಸ್.ಯಾಸಿರ್ ಹಾಜಿ ಕಲ್ಲಡ್ಕ ಆಯ್ಕೆ

- Advertisement -
- Advertisement -

ಪುತ್ತೂರು : ನೆಹರುನಗರದ ಸುದಾನ ಪದವಿ ಪೂರ್ವ ಕಾಲೇಜಿನ 2026–27ನೇ ಶೈಕ್ಷಣಿಕ ಸಾಲಿನ ಶಿಕ್ಷಕ-ರಕ್ಷಕ ಸಂಘ(ಪಿಟಿಎ)ದ ಅಧ್ಯಕ್ಷರಾಗಿ ಕೆ.ಎಸ್.ಯಾಸಿರ್ ಹಾಜಿ ಕಲ್ಲಡ್ಕ ಆಯ್ಕೆಯಾಗಿದ್ದಾರೆ.

ಕಾಲೇಜಿನ ಸಭಾಂಗಣದಲ್ಲಿ ಬುಧವಾರ ನಡೆದ ರಚನಾ ಸಭೆಯಲ್ಲಿ ಈ ಆಯ್ಕೆ ನಡೆಯಿತು. ಉಪಾಧ್ಯಕ್ಷರಾಗಿ ಸದಾಶಿವ ಶೆಟ್ಟಿ ಮಾಣಿ ಹಾಗೂ ಕಾರ್ಯದರ್ಶಿಯಾಗಿ ಆಶಾ ನಾಯಕ್ ಆಯ್ಕೆಯಾದರು. ಸದಸ್ಯರಾಗಿ ರಶೀದ್ ವಿಟ್ಲ, ತೋಟ ಕೃಷ್ಣಪ್ಪ ಪೂಜಾರಿ, ರಫೀಕ್ ಹಾಜಿ ನೇರಳಕಟ್ಟೆ, ನೋಟರಿ ಅಬೂಬಕ್ಕರ್ ವಿಟ್ಲ, ಸೀಮಾ ರಾವ್, ಸಿಲ್ವೆಸ್ಟರ್ ಎಡ್ವಿನ್ ರೊಡ್ರಿಗಸ್, ಸುಷ್ಮಾ ಭಟ್, ಇಂದಿರಾ ಕೆ.ಎಸ್., ಹಾಗೂ ಶೆರಿನ್ ಬಾನು ಆಯ್ಕೆಯಾದರು.

ಸಭೆಯ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲ ಸುಪ್ರೀತ್ ಕೆ.ಸಿ. ಮಾತನಾಡಿ, ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿ ಹಾಗೂ ಸರ್ವತೋಮುಖ ಅಭಿವೃದ್ಧಿಗೆ ಪೋಷಕರ ಸಹಭಾಗಿತ್ವವನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ಹಾಗೂ ಅವರ ಉಜ್ವಲ ಭವಿಷ್ಯ ನಿರ್ಮಾಣದಲ್ಲಿ ಶಿಕ್ಷಕರು ಮತ್ತು ಪೋಷಕರ ನಡುವಿನ ಸಮನ್ವಯ ಅತ್ಯಂತ ಮಹತ್ವದ್ದಾಗಿದ್ದು, ಶಿಕ್ಷಕ-ರಕ್ಷಕ ಸಂಘವು ಕಾಲೇಜಿನ ಅಭಿವೃದ್ಧಿ ಹಾಗೂ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಪರಿಣಾಮಕಾರಿ ವೇದಿಕೆಯಾಗಿ ಕಾರ್ಯನಿರ್ವಹಿಸಲಿದೆ ಎಂದು ಅಭಿಪ್ರಾಯಪಟ್ಟರು.

ಇದೇ ವೇಳೆ ಸಭೆಯಲ್ಲಿ ಕಾಲೇಜಿನ ಶೈಕ್ಷಣಿಕ ಚಟುವಟಿಕೆಗಳು, ವಿದ್ಯಾರ್ಥಿಗಳ ಶೈಕ್ಷಣಿಕ ಸಾಧನೆ, ಶಿಸ್ತು, ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ, ವೃತ್ತಿ ಮಾರ್ಗದರ್ಶನ ಹಾಗೂ ಕಾಲೇಜಿನ ಸಮಗ್ರ ಅಭಿವೃದ್ಧಿಯಲ್ಲಿ ಪೋಷಕರ ಸಕ್ರಿಯ ಪಾತ್ರದ ಕುರಿತು ಚರ್ಚಿಸಲಾಯಿತು.

ಗಣಿತಶಾಸ್ತ್ರ ಉಪನ್ಯಾಸಕಿ ಪಲ್ಲವಿ ಪಿ. ಸ್ವಾಗತಿಸಿ, ಉಪನ್ಯಾಸಕಿ ಶ್ರುತಿ ರೈ ವಂದಿಸಿದರು.

- Advertisement -

Related news

error: Content is protected !!