





ಪುತ್ತೂರು: ಅಕ್ರಮವಾಗಿ ಜಾನುವಾರನ್ನು ಸಾಗಿಸುತ್ತಿದ್ದ ಆರೋಪದ ಮೇಲೆ ಪುತ್ತೂರು ಗ್ರಾಮಾಂತರ ಪೊಲೀಸರು ಇಬ್ಬರನ್ನು ಬಂಧಿಸಿ, ಒಂದು ಜಾನುವಾರು ಹಾಗೂ ಪಿಕ್‌ಅಪ್ ವಾಹನವನ್ನು ವಶಪಡಿಸಿಕೊಂಡಿದ್ದಾರೆ.
ಜೂನ್ 25ರಂದು ಸಂಜೆ ಪುತ್ತೂರು ಗ್ರಾಮಾಂತರ ಠಾಣೆಯ ಪೊಲೀಸ್ ಉಪನಿರೀಕ್ಷಕಿ ಸುಷ್ಮಾ ಜಿ. ಭಂಡಾರಿ ಅವರಿಗೆ ಅಕ್ರಮ ಗೋಸಾಗಾಟದ ಬಗ್ಗೆ ಖಚಿತ ಮಾಹಿತಿ ಲಭಿಸಿದ ಹಿನ್ನೆಲೆಯಲ್ಲಿ ಸಿಬ್ಬಂದಿಗಳೊಂದಿಗೆ ಆರ್ಯಾಪು ಗ್ರಾಮದ ಮರಕ್ಕ ಎಂಬಲ್ಲಿ KA-21-5450 ನೋಂದಣಿಯ ಪಿಕ್‌ಅಪ್ ವಾಹನವನ್ನು ತಡೆದು ಪರಿಶೀಲಿಸಿದಾಗ, ಒಂದು ಜಾನುವಾರನ್ನು ಹಿಂಸಾತ್ಮಕವಾಗಿ ಸಾಗಿಸುತ್ತಿರುವುದು ಪತ್ತೆಯಾಯಿತು.
ವಾಹನದ ಚಾಲಕ ನಾರಾಯಣ ಹಾಗೂ ಸಹಪ್ರಯಾಣಿಕ ಮೊಯ್ದುಕುಂಞ ಅವರನ್ನು ವಿಚಾರಿಸಿದಾಗ ಜಾನುವಾರು ಸಾಗಾಟಕ್ಕೆ ಅಗತ್ಯ ದಾಖಲೆಗಳು ಹಾಗೂ ಪೂರ್ವಾನುಮತಿ ಇಲ್ಲದಿರುವುದು ದೃಢಪಟ್ಟಿದೆ.
ಪೊಲೀಸರು ಜಾನುವಾರು ಹಾಗೂ ವಾಹನವನ್ನು ವಶಪಡಿಸಿಕೊಂಡು, ಆರೋಪಿಗಳ ವಿರುದ್ಧ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿಅ.ಕ್ರ: 95-20262, ಕಲಂ: 5, 7, 12 ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣಾ ಕಾಯ್ದೆ 2020 ಮತ್ತು ಕಲಂ 11(ಡಿ) ಪ್ರಾಣಿ ಹಿಂಸೆ ನಿಷೇಧ ಕಾಯ್ದೆ 19603 ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.








