


ಪುತ್ತೂರು: ಸಹ್ಯಾದ್ರಿ ಫ್ರೆಂಡ್ಸ್ (ರಿ.) ಕೈಕಾರ ಪುತ್ತೂರು ದ.ಕ ಇದರ ಆಶ್ರಯದಲ್ಲಿ ರೋಟರಿ ಕ್ಲಬ್ ಪುತ್ತೂರು ಸ್ವರ್ಣ ಇವರ ಸಹಕಾರದೊಂದಿಗೆ 8ನೇ ವರ್ಷದ “ಆಟಿದ ತಿಂಗೊಳ್ಡ್ ಕೆಸರ್ಡೊಂಜಿ ದಿನ” ಕಾರ್ಯಕ್ರಮವು ಆ.4ನೇ ಆದಿತ್ಯವಾರದಂದು ಕೈಕಾರ, ಪಳ್ಳತ್ತಾರು ಜೂಮಾದಿ ದೈವಸ್ಥಾನದ ಬಳಿ ಸರಸ್ವತಿ ಹೊಸಲಕ್ಕೆ ಇವರ ಗದ್ದೆಯಲ್ಲಿ ನಡೆಯಲಿದೆ.


ಸಂಜೆ 6 ಗಂಟೆಗೆ ಸಮಾರೋಪ ಸಮಾರಂಭ ಕಾರ್ಯಕ್ರಮ ನಡೆಯಲಿದೆ. ದಕ್ಷಿಣ ಕನ್ನಡ ಮಾಜಿ ಸಂಸದ, ನಿಕಟಪೂರ್ವ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಕಾರ್ಯಕ್ರಮದ ಸಭಾಧ್ಯಕ್ಷತೆಯನ್ನು ವಹಿಸಲಿದ್ದಾರೆ.
ಕಾರ್ಯಕ್ರಮದಲ್ಲಿ ಪುತ್ತೂರು ಮಾಜಿ ಶಾಸಕ ಸಂಜೀವ ಮಠಂದೂರು, ಜೀರ್ಣೋದ್ಧಾರ ಸಮಿತಿ, ಶ್ರೀ ಸುಬ್ರಹ್ಮಣ್ಯ ದೇವಸ್ಥಾನ, ಕಾರ್ಪಾಡಿ ಅಧ್ಯಕ್ಷ ರಾಧಾಕೃಷ್ಣ ರೈ ಬೂಡಿಯಾರು, ದಕ್ಷಿಣ ಕನ್ನಡ ಭಾರತೀಯ ಜನತಾ ಪಾರ್ಟಿ ಪ್ರಧಾನ ಕಾರ್ಯದರ್ಶಿ ಕಿಶೋರ್ ಕುಮಾರ್ ಬೊಟ್ಯಾಡಿ, ಬಿಜೆಪಿ ಗ್ರಾಮಾಂತರ ಮಂಡಲ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವ, ತಾ. ಪಂಚಾಯತ್, ಪುತ್ತೂರು ಮಾಜಿ ಅಧ್ಯಕ್ಷ ರಾಧಾಕೃಷ್ಣ ಬೋರ್ಕರ್, ಪುತ್ತೂರು,ಸಿಝರ್, ಸಿಝರ್ ಪ್ರಸನ್ನ ಕುಮಾರ್ ಶೆಟ್ಟಿ, ಸೀತಾರಾಮ ರೈ ಸಿ., ಕೈಕಾರ, ಕರ್ನಾಟಕ ಸರ್ಕಾರ, ಅಭಿವೃದ್ಧಿ ಪ್ರಾಧಿಕಾರ, ಮಾಜಿ ನಿರ್ದೇಶಕ ರಾಜಶೇಖರ್ ಶೆಟ್ಟಿ ಮಡಂತ್ಯಾರು, ಪುತ್ತೂರು ಪದ್ಮಶ್ರೀ ಸೋಲಾರ್ ಸಿಸ್ಟಮ್ ಸೀತಾರಾಮ ರೈ ಕೆದಂಬಾಡಿಗುತ್ತು, ಪುತ್ತೂರು ವಿಜಯ ಸಾಮ್ರಾಟ್ ಚಾರಿಟೇಬಲ್ ಟ್ರಸ್ (ರಿ.) ಸಹಜ್ ರೈ ಬಳಜ್ಜ, ಒಳಮೊಗ್ರು ಗ್ರಾಮ ಪಂಚಾಯತ್ ಮಾಜಿ ಸದಸ್ಯ ಶಶಿಕಿರಣ್ ರೈ ಮೊಡಪ್ಪಾಡಿ, ಸವಣೂರು ಗ್ರಾಮ ಪಂಚಾಯತ್ ಸದಸ್ಯ ಭರತ್ ರೈ ತೊಟ್ಲ, ಕೈಕಾರ ಅಡಿಕೆ ವ್ಯಾಪಾರಸ್ಥರು ಯೂಸೂಫ್ ಹಾಜಿ ಕೈಕಾರ ಮುಖ್ಯಅತಿಥಿಗಳಾಗಿ ಭಾಗವಹಿಸಲಿದ್ದಾರೆ.








