Monday, June 22, 2026
spot_imgspot_img
spot_imgspot_img

ಪುತ್ತೂರು: ಕೂಲಿ ಕಾರ್ಮಿಕನ ಮೃತದೇಹ ರಸ್ತೆ ಬದಿ ಮಲಗಿಸಿ ಹೋದ ಪ್ರಕರಣ; ಪ್ರಮುಖ ಆರೋಪಿ ಸಹಿತ ಮೂವರ ಬಂಧನ..!

- Advertisement -
- Advertisement -

ಪುತ್ತೂರು: ಸಾಲ್ಮರ ಕೆರೆಮೂಲೆಯಲ್ಲಿ ಕೂಲಿ ಕಾರ್ಮಿಕನ ಮೃತದೇಹವನ್ನು ರಸ್ತೆ ಬದಿಯಲ್ಲಿ ಇರಿಸಿ ಹೋಗಿರುವ ಪ್ರಕರಣಕ್ಕೆ ಸಂಬಂಧಿಸಿದ ಪ್ರಮುಖ ಆರೋಪಿಯಾಗಿರುವ ಹೆನ್ರಿ ತಾವೋ ಸಹಿತ ಮೂವರನ್ನು ಪುತ್ತೂರು ಪೊಲೀಸರು ಬಂಧಿಸಿದ್ದಾರೆ.

ಬಂಧಿತರನ್ನು ಹೆನ್ರಿ ತಾವೋ, ಅವರ ಪುತ್ರ ಕಿರಣ್ ಮತ್ತು ಸಹಾಯಕ ಪ್ರಕಾಶ್ ಎಂದು ಗುರುತಿಸಲಾಗಿದೆ.

ಆರೋಪಿಗಳ ವಿರುದ್ಧದಲಿತ ದೌರ್ಜನ್ಯ ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು ಓರ್ವ ಆರೋಪಿಯನ್ನು ಈ ಹಿಂದೆಯೇ ಬಂದಿಸಿದ್ದರು.

ಸಹಾಯಕ ಕೂಲಿ ಕಾರ್ಮಿಕ ಶಿವಪ್ಪ ಅವರ ಮೃತ ದೇಹವನ್ನು ಪಿಕಪ್ ವಾಹನದಲ್ಲಿ ತಂದು ಅವರ ಮನೆಯ ಮುಂದಿನ ರಸ್ತೆ ಸಮೀಪ ಇರಿಸಿ ಹೋದ ಘಟನೆ ನ.16ರಂದು ಸಾಲ್ಮರ ಕೆರೆಮೂಲೆಯಲ್ಲಿ ನಡೆದಿತ್ತು. ಈ ಹಿನ್ನೆಲೆಯಲ್ಲಿ ಶಿವಪ್ಪ ಅವರು ಕೆಲಸ ಮಾಡುತ್ತಿದ್ದ ಸಂಸ್ಥೆಯ ಮಾಲಕ ಹೆನ್ರಿ ತಾವೋ ಅವರ ಸಹಿತ ಮೂವರ ವಿರುದ್ಧ ದಲಿತ ದೌರ್ಜನ್ಯ ಪ್ರಕರಣ ದಾಖಲಾಗಿತ್ತು. ತನಿಖೆ ನಡೆಸಿದ ಪೊಲೀಸರು ಸ್ಪ್ಯಾನಿ ಮೇಸ್ತ್ರಿ ಎಂಬವರನ್ನು ಆರಂಭದಲ್ಲಿ ಬಂಧಿಸಿದ್ದರು. ಈ ನಡುವೆ ಪ್ರಕರಣಕ್ಕೆ ಸಂಬಂಧಿಸಿ ಹೆನ್ರಿ ತಾವೋ ಅವರ ಪುತ್ರನ ವಿರುದ್ಧವೂ ಆದಿ ದ್ರಾವಿಡ ಸಂಘಟನೆ ಪೊಲೀಸರಿಗೆ ದೂರು ನೀಡಿತ್ತು. ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು ಇದೀಗ ಹೆನ್ರಿ ತಾವೋ, ಅವರ ಪುತ್ರ ಕಿರಣ್ ಮತ್ತು ಸಹಾಯಕ ಪ್ರಕಾಶ್ ಎಂಬವರನ್ನು ಬಂಧಿಸಿದ್ದಾರೆ.

ಪ್ರಕರಣದ ಪ್ರಮುಖ ಆರೋಪಿ ಹೆನ್ರಿ ತಾವೋ ಅವರ ಬಂಧನಕ್ಕೆ ಆಗ್ರಹಿಸಿ ಆದಿ ದ್ರಾವಿಡ ಸಮಾಜ ಸೇವಾ ಸಂಘದ ಆಶ್ರಯದಲ್ಲಿ ನ.22ರಂದು ಪ್ರತಿಭಟನೆ ನಡೆದಿತ್ತು.

- Advertisement -

Related news

error: Content is protected !!