





ಪುತ್ತೂರು: ಕೆಲ ದಿನಗಳ ಹಿಂದೆ ಬೈಕ್‌ನಿಂದ ಬಿದ್ದು ತೀವ್ರ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಾಡಾವು ಜ್ಯೂನಿಯರ್ ಕಾಲೇಜಿನ ಅತಿಥಿ ಉಪನ್ಯಾಸಕಿ ಸುನಂದ ಅಚ್ಚುತ ಪೂಜಾರಿಯವರು ನಿನ್ನ ರಾತ್ರಿ ಮಂಗಳೂರಿನ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
ಕಳೆದ ಶುಕ್ರವಾರ ತಮ್ಮ ಕುಟುಂಬದ ತರವಾಡು ಮನೆ, ಈಶ್ವರಮಂಗಲದ ಮೇನಾಲಕ್ಕೆ ನಿಕಟ ಸಂಬಂಧಿಕರೊಬ್ಬರ ಬೈಕಲ್ಲಿ ಹೋಗುತ್ತಿರುವಾಗ ಮಳೆ ಬಂದ ಕಾರಣಕ್ಕಾಗಿ ಕೊಡೆ ಬಿಡಿಸಿದ ಸಂದರ್ಭದಲ್ಲಿ, ಗಾಳಿಗೆ ಕೊಡ ಎಳೆಯಲ್ಪಟ್ಟು ಇವರು ಬೈಕ್‌ನಿಂದ ಜಾರಿ ರಸ್ತೆಗೆ ಬಿದ್ದು ತಲೆಗೆ ತೀವ್ರ ಪೆಟ್ಟು ಬಿದ್ದ ಕಾರಣ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಯಿತು. ಆ ಬಳಿಕ ಆಪರೇಶನ್ ಮಾಡಿದರೂ ಚಿಕಿತ್ಸೆ ಫಲಕಾರಿಯಾಗದ ನಿನ್ನೆ ರಾತ್ರಿ (ಸೆ.11) ನಿಧನರಾದರು ಎಂದು ತಿಳಿದುಬಂದಿದೆ.
ಸುಳ್ಯದ ಬೀರಮಂಗಲ ನಿವಾಸಿ, ಸುಳ್ಯ ಸರಕಾರಿ ಪದವಿ ಕಾಲೇಜಿನಲ್ಲಿ ಹಿಂದೆ ಪ್ರಾಂಶುಪಾಲರಾಗಿದ್ದು, ಈಗ ಬಂಟ್ವಾಳದ ಕಾಮಾಜೆ ಸರಕಾರಿ ಪದವಿ ಕಾಲೇಜಿನಲ್ಲಿ ಉಪನ್ಯಾಸಕರಾಗಿರುವ ಡಾ.ಅಚ್ಚುತ ಪೂಜಾರಿಯವರ ಪತ್ನಿಯಾಗಿದ್ದಾರೆ. ಪತಿ ಹಾಗೂ ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.