ಕ್ರಮ ಕೈಗೊಳ್ಳುವಂತೆ ದ.ಕ ಜಿಲ್ಲಾ ಪುತ್ತೂರು ಮಹಿಳಾ ಬಿಜೆಪಿ ಮೋರ್ಚಾ ಅಧ್ಯಕ್ಷರಿಂದ ಅರ್ಜಿ ಸಲ್ಲಿಕೆ



ಪುತ್ತೂರು ಮಹಾತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ನಟರಾಜ ವೇದಿಕೆಯಲ್ಲಿ ಕಾಂಗ್ರೇಸ್ ಪಕ್ಷದ ದ.ಕ ಜಿಲ್ಲಾ ಗ್ರಾಮಾಂತರ ಮಹಿಳಾ ಕಾಂಗ್ರೇಸ್ ಇದರ ವತಿಯಿಂದ ರಾಜಕೀಯ ಕಾರ್ಯಕ್ರಮ ನಡೆಸಿರುವ ಕುರಿತು ಕ್ರಮ ಕೈಗೊಳ್ಳುವಂತೆ ದ.ಕ ಪುತ್ತೂರು ಮಹಿಳಾ ಬಿಜೆಪಿ ಮೋರ್ಚಾ ಅಧ್ಯಕ್ಷರು ಪುತ್ತೂರು ಮಹಾತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಕಾರ್ಯ ನಿರ್ವಹಣಾಧಿಕಾರಿಗಳಿಗೆ ಅರ್ಜಿ ಸಲ್ಲಿಸಿದರು.
ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನವು Karnataka Hindu Religious Institutions and Charitable Endowments Act 1997 ಅಡಿಯಲ್ಲಿ ನೋಂದಾಯಿತವಾಗಿದ್ದು ಇದು ಧಾರ್ಮಿಕ ದತ್ತಿ ಇಲಾಖೆಯ ಆಡಳಿತಕೆ, ಒಳಪಟ್ಟಿರುವ ದೇವಸ್ಥಾನವಾಗಿದೆ.
Karnataka Hindu Religious Institutions and Charitable Endowments Act, 1997 ಕಾಯ್ಧೆಯ ಪ್ರಕಾರ ದೇವಸ್ಥಾನದ ಆಸ್ತಿ, ಹಾಲ್, ಕಟ್ಟಡಗಳು ಹಾಗೂ ಇತರೆ ಸೌಕರ್ಯಗಳು ಧಾರ್ಮಿಕ ದರ್ಮಾರ್ಥ ಉದ್ದೇಶಗಳಿಗೆ ಮಾತ್ರ ಬಳಸಬೇಕು ಎಂದು ಕಾನೂನು ಸ್ಪಷ್ಟಪಡಿಸುತ್ತದೆ. ವಿಶೇಷವಾಗಿ ಈ ಕಾಯ್ಧೆಯ section 19 section25 ಹಾಗೂ Section 63 ಪ್ರಕಾರ ದೇವಸ್ಥಾನದ ಆಸ್ತಿಗಳ ಬಳಕೆ ಮತ್ತು ಅದರ ನಿರ್ವಹಣೆ ಧಾರ್ಮಿಕ ಉದ್ದೇಶಗಳಿಗೆ ಮಾತ್ರ ಸೀಮಿತವಾಗಿರಬೇಕು ಮತ್ತು ಅವುಗಳ ದುರುಪಯೋಗವನ್ನು ತಡೆಯುವ ಜವಾಬ್ದಾರಿ ಆಡಳಿತಾಧಿಕಾರಿಗಳಿಗೆ ಇದೆ.
ಆದರೆ, ದಿನಾಂಕ 08.03.2026 ರಂದು ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ನಟರಾಜ ವೇದಿಕೆಯಲ್ಲಿ ದ.ಕ ಜಿಲ್ಲಾ ಗ್ರಾಮಾಂತರ ಮಹಿಳಾ ಕಾಂಗ್ರೇಸ್ ಇದರ ವತಿಯಿಂದ ಮಹಿಳಾ ಸಂಭ್ರಮ ಕಾರ್ಯಕ್ರಮವನ್ನು ಆಯೋಜಿಸಿರುವುದು ನಮ್ಮ ಗಮನಕ್ಕೆ ಬಂದಿದೆ. ದೇವಸ್ಥಾನದ ಪವಿತ್ರ ಆವರಣದಲ್ಲಿ ರಾಜಕೀಯ ಚಟುವಟಿಕೆಗಳನ್ನು ನಡೆಸುವುದು ದೇವಸ್ಥಾನದ ಧಾರ್ಮಿಕ ಸ್ವರೂಪಕ್ಕೆ ಧಕ್ಕೆ ತರುವಂತದ್ದು ಮತ್ತು ಮೇಲ್ಕಂಡ ಕಾಯ್ದೆಯ ಉದ್ದೇಶ ಹಾಗೂ ನಿಯಮಗಳಿಗೆ ವಿರುದ್ಧವಾಗಿದೆ. ಮತ್ತು ಈ ಕಾರ್ಯಕ್ರಮದಲ್ಲಿ ಅನ್ಯಧರ್ಮದ ವ್ಯಕ್ತಿಗಳು ಕೂಡ ಭಾಗಿಯಾಗಿರುವುದು ದೇವಸ್ಥಾನದ ಭಕ್ತರಾದ ನಮ್ಮ ಧಾರ್ಮಿಕ ಭಾವನೆಗೆ ಧಕ್ಕೆ ತರುವಂತಹ ಕಾರ್ಯ ನಡೆದಿರುತ್ತದೆ.
ಇಂತಹ ಘಟನೆಗಳು ಮುಂದುವರಿದರೆ ಸಾರ್ವಜನಿಕರಲ್ಲಿ ಧಾರ್ಮಿಕ ಭಾವನೆಗಳಿಗೆ ಧಕ್ಕೆಯಾಗುವ ಸಾಧ್ಯತೆ ಇದ್ದು ಸಮಾಜದಲ್ಲಿ ಅನಾವಶ್ಯಕ ಉದ್ವಿಗ್ನತೆ ಉಂಟಾಗುವ ಪರಿಸ್ಥಿತಿ ಉಂಟಾಗಬಹುದು.ಆದುದರಿಂದ, ದಯವಿಟ್ಟು ಕೆಳಕಂಡಂತೆ ಕ್ರಮ ಕೈಗೊಳ್ಳುವಂತೆ ವಿನಂತಿಸುತ್ತೇನೆ. ದೇವಸ್ಥಾನದ ನಟರಾಜ ವೇದಿಕೆಯಲ್ಲಿ ರಾಜಕೀಯ ಕಾರ್ಯಕ್ರಮ ನಡೆಸಿದ ಘಟನೆ ಕುರಿತು ತಕ್ಷಣ ತನಿಖೆ ನಡೆಸಬೇಕು. ದೇವಸ್ಥಾನದ ಆಸ್ತಿಯನ್ನು ದುರುಪಯೋಗಪಡಿಸಿಕೊಂಡ ಸಂಬಂಧಪಟ್ಟವರ ವಿರುದ್ಧ Karnataka Hindu Religious Institutions and Charitable Endowments Act, 1997 ಅಡಿಯಲ್ಲಿ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು.ಮುಂದಿನ ದಿನಗಳಲ್ಲಿ ದೇವಸ್ಥಾನದ ಆಸ್ತಿಯನ್ನು ರಾಜಕೀಯ ಕಾರ್ಯಕ್ರಮಗಳಿಗೆ ಬಳಸುವುದನ್ನು ಕಟ್ಟುನಿಟ್ಟಾಗಿ ನಿಷೇಧಿಸುವಂತೆ ಸಂಬಂಧಪಟ್ಟವರಿಗೆ ಸೂಚನೆ ನೀಡಬೇಕು.ಈ ಬಗ್ಗೆ ತಾವು ಕ್ರಮ ಕೈಗೊಂಡ ಬಗ್ಗೆ ತಮ್ಮ ಕಚೇರಿಯ ಹಿಂಬರಹವನ್ನು 7 ದಿನಗಳೊಳಗೆ ನಿರೀಕ್ಷಿಸುತ್ತೇನೆ ಎಂದು ಪತ್ರದ ಮೂಲಕ ಮನವಿ ಮಾಡಿದ್ದಾರೆ.
ಈ ಸಂದರ್ಭದಲ್ಲಿ ಸ್ವರ್ಣ ಲತಾ ಹೆಗಡೆ ನಗರ ಮಂಡಲ ಅಧ್ಯಕ್ಷರು ಮಹಿಳಾ ಮೋರ್ಚ ಪ್ರಧಾನ ಕಾರ್ಯದರ್ಶಿ ಜಯಲಕ್ಷ್ಮಿ ಜಿಲ್ಲಾ ಕಾರ್ಯದರ್ಶಿ ವಿದ್ಯಾ ಗೌರಿ ನಗರ ಮಂಡಲ ಅಧ್ಯಕ್ಷರು ಶಿವಕುಮಾರ್ ಪಿಬಿ ಪ್ರಧಾನ ಕಾರ್ಯದರ್ಶಿ ಶಶಿಧರ್ ನಾಯಕ್ ಓಬಿಸಿ ಮೋರ್ಚಾ ಅಧ್ಯಕ್ಷರು ನಿರಂಜನ್ಮಾನ್ಯ ಶಕ್ತಿಕೇಂದ್ರ ಅಧ್ಯಕ್ಷರು ನಾಗೇಂದ್ರ ಬಾಳಿಗ ಗ್ರಾಮಾಂತರ ಮಂಡಲ ಉಪಾಧ್ಯಕ್ಷರು ನಾಗೇಶ್ ಕಾರ್ಯಕರ್ತ ರವಿ ಉಪಸ್ಥಿತರಿದ್ದರು








