Wednesday, June 17, 2026
spot_imgspot_img
spot_imgspot_img

ಪುತ್ತೂರು: ಬೈಕ್- ಸ್ಕೂಟರ್‍ ನಡುವೆ ಅಪಘಾತ; ಮೂವರಿಗೆ ಗಾಯ..!

- Advertisement -
- Advertisement -

ಪುತ್ತೂರು: ಬೈಕ್ ಮತ್ತು ಸ್ಕೂಟರ್ ನಡುವೆ ಅಪಘಾತ ಸಂಭವಿಸಿ ಮಹಿಳೆ ತೀವ್ರ ಗಾಯಗೊಂಡ ಘಟನೆ ಪುತ್ತೂರು – ಉಪ್ಪಿನಂಗಡಿ ರಸ್ತೆಯ ಕೇಪುಳು ಜಂಕ್ಷನ್‌ನಲ್ಲಿ ನಡೆದಿದೆ.

ಪುತ್ತೂರು – ಉಪ್ಪಿನಂಗಡಿ ರಸ್ತೆಯಲ್ಲಿ ಚಲಿಸುತ್ತಿದ್ದ ಬೈಕ್ ಮತ್ತು ಕೇಪುಳು ರಸ್ತೆಯಿಂದ ಮುಖ್ಯ ರಸ್ತೆಗೆ ಬರುತ್ತಿದ್ದ ಸ್ಕೂಟರ್ ನಡುವೆ ಅಪಘಾತ ಸಂಭವಿಸಿದೆ. ಸ್ಕೂಟರ್‌ನಲ್ಲಿದ್ದ ಸವಾರ ಮತ್ತು ಹಿಂಬದಿ ಸವಾರೆ ಹಾಗೂ ಬೈಕ್ ಸವಾರನಿಗೆ ಗಾಯವಾಗಿದೆ.

ಸ್ಕೂಟರ್ ಹಿಂಬದಿ ಸವಾರೆ ತೀವ್ರ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ. ಘಟನಾ ಸ್ಥಳಕ್ಕೆ ಸಂಚಾರ ಪೊಲೀಸರು ಆಗಮಿಸಿ ಮಾಹಿತಿ ಪಡೆದುಕೊಂಡಿದ್ದಾರೆ.

- Advertisement -

Related news

error: Content is protected !!