Saturday, June 6, 2026
spot_imgspot_img
spot_imgspot_img

ಪುತ್ತೂರು: ತಲವಾರು ಪ್ರದರ್ಶನ ಘಟನೆ ಬಗ್ಗೆ ಸುಳ್ಳು ಮಾಹಿತಿ ಪ್ರಸಾರ ಆರೋಪ; SDPI ಅಧ್ಯಕ್ಷನ ವಿರುದ್ಧ ಪ್ರಕರಣ ದಾಖಲು..!!

- Advertisement -
- Advertisement -

ಪುತ್ತೂರು: ಬೊಳುವಾರಿನಲ್ಲಿ ವ್ಯಕ್ತಿಯೋರ್ವ ಸಾರ್ವಜನಿಕವಾಗಿ ತಲವಾರು ಪ್ರದರ್ಶಿಸಿದ ಘಟನೆಗೆ ಸಂಬಂಧಿಸಿದಂತೆ, “ನಾವು ಭಾರತೀಯ ಸೇನೆ” ಎಂಬ ಪೇಸ್ ಬುಕ್ ಪೇಜಿನಲ್ಲಿ ಸುಳ್ಳು ಮಾಹಿತಿ ಪ್ರಸಾರ ಮಾಡಿದ ಆರೋಪದಲ್ಲಿ ಎಸ್.ಡಿ.ಪಿ.ಐ ಪುತ್ತೂರು ವಿಧಾನಸಭಾ ಕ್ಷೇತ್ರ ಸಮಿತಿ ಅಧ್ಯಕ್ಷ ಅಶ್ರಫ್ ಬಾವು ವಿರುದ್ಧ ಪ್ರಕರಣ ದಾಖಲಾಗಿದೆ.

ಜು.14ರಂದು ಪುತ್ತೂರು ಕಸಬಾ ಗ್ರಾಮದ ಬೊಳುವಾರು ಎಂಬಲ್ಲಿ ವ್ಯಕ್ತಿಯೋರ್ವ ಸಾರ್ವಜನಿಕವಾಗಿ ತಲವಾರು ಪ್ರದರ್ಶಿಸಿದ ಘಟನೆಗೆ ಸಂಬಂಧಿಸಿದಂತೆ, “ನಾವು ಭಾರತೀಯ ಸೇನೆ” ಎಂಬ ಪೇಸ್ ಬುಕ್ ಪೇಜಿನಲ್ಲಿ, ಪ್ರಕರಣದ ಆರೋಪಿ ಆಶ್ರಪ್ ಬಾವು” ಅಧ್ಯಕ್ಷ, ಎಸ್.ಡಿ.ಪಿ.ಐ, ಪುತ್ತೂರು ವಿಧಾನಸಭಾ ಕ್ಷೇತ್ರ” ಎಂಬಾತನು ಘಟನೆಯ ಬಗ್ಗೆ ನೈಜತೆಯನ್ನು ಪರಿಶೀಲಿಸದೇ ಸಮಾಜದಲ್ಲಿ ಧರ್ಮಧರ್ಮಗಳ ನಡುವೆ ವೈಮನಸ್ಸು ಹಾಗೂ ದ್ವೇಷ ಉಂಟಾಗುವ ರೀತಿಯಲ್ಲಿ ಸುಳ್ಳು ಮಾಹಿತಿಯನ್ನು ಪ್ರಸಾರ ಮಾಡಿರುವ ಬಗ್ಗೆ ಆ.05.ರಂದು ಕಂಡುಬಂದಿರುತ್ತದೆ.

ಈ ಹಿನ್ನಲೆಯಲ್ಲಿ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಅ ಕ್ರ: 68/2025 ಕಲಂ: 240 ,353(2)BNS 2023. ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

- Advertisement -

Related news

error: Content is protected !!