Sunday, October 6, 2024
spot_imgspot_img
spot_imgspot_img

ಪುತ್ತೂರು: ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್‌..!

- Advertisement -
- Advertisement -

ಪುತ್ತೂರು: 14 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ವಾರಂಟ್ ಆಸಾಮಿಯನ್ನು ಪುತ್ತೂರು ಗ್ರಾಮಾಂತರ ಪೊಲೀಸರು ಬಂಧಿಸಿದ ತೆಲಂಗಾಣ ರಾಜ್ಯದ ಹೈದ್ರಾಬಾದ್‌ನಲ್ಲಿ ಬಂಧಿಸಿದ್ದಾರೆ.

ಬಂಧಿತ ಆರೋಪಿಯನ್ನು ಆಂಧ್ರಪ್ರದೇಶದ ಗೋದಾವರಿ ಜಿಲ್ಲೆಯ ಮಹಮ್ಮದ್ ಇಕ್ಬಾಲ್ ಅಲಿಯಾಸ್‌‌‌ ಪ್ರವೀಣ್ ಕುಮಾರ್ ತೊಮರ್ (53) ಎಂದು ಗುರುತಿಸಲಾಗಿದೆ.

ಬಂಧಿತ ಆರೋಪಿ ವಿರುದ್ದ ಪುತ್ತೂರು ಗ್ರಾಮಾಂತರ ಪೊಲೀಸ್ ‌ಠಾಣಾ ಅ,ಕ್ರ 15/2008 ಕಲಂ 416, 420, 511 ಜೊತೆಗೆ 34 Ipc ಪ್ರಕರಣ ದಾಖಲಾಗಿತ್ತು. ಸುಮಾರು 14 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ. ನ್ಯಾಯಾಲಯವು ಆರೋಪಿ ವಿರುದ್ದ ವಾರಂಟ್ ಜಾರಿ ಮಾಡಿತ್ತು. ತನಿಖೆ ಕೈಗೆತ್ತಿಕೊಂಡ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣಾ ಪೊಲೀಸ್ ನಿರೀಕ್ಷಕರು ರವಿ ಬಿ ಎಸ್ ರವರು ಹಾಗೂ ಮಾನ್ಯ ಪೊಲೀಸ್ ಉಪನಿರೀಕ್ಷಕರು ಜಂಬೂರಾಜ್ ಮಹಾಜನ್ (ಕಾ&ಸು)ರವರ ಮಾರ್ಗದರ್ಶನದಲ್ಲಿ, ASI ಪರಮೇಶ್ವರ್ ಕೆ, Hc 396 ಮಧು ಕೆ ಎನ್, pc 1968 ಅಸ್ತಮಾ ರವರ ತಂಡ ತೆಲಂಗಾಣ ರಾಜ್ಯದ ಹೈದ್ರಾಬಾರ್‌ನಲ್ಲಿ ಆರೋಪಿಯನ್ನು ಪತ್ತೆ ಹಚ್ಚಿ ಸೆ.28 ರಂದು ನ್ಯಾಯಾಲಯಕ್ಕೆ ಹಾಜರುಪಡಿಸಿರುತ್ತಾರೆ.

- Advertisement -

Related news

error: Content is protected !!