- Advertisement -
- Advertisement -


ಪುತ್ತೂರು: ಅಕ್ರಮ ಗೋಸಾಗಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯ ಮನೆ ಮತ್ತು ಕೊಟ್ಟಿಗೆಯನ್ನು ಪೊಲೀಸರು ಜಪ್ತಿ ಮಾಡಿದ ಘಟನೆ ನಡೆದಿದೆ.
ದಿನಾಂಕ ಅ. 5 ರಂದು ಪುತ್ತೂರು ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಅಕ್ರಮ ಗೋಸಾಗಾಟ ನಡೆದಿತ್ತು. ಈ ಬಗ್ಗೆ ಪುತ್ತೂರು ಗ್ರಾಮಾಂತರ ಠಾಣೆಯಲ್ಲಿ ಅ.ಕ್ರ: 125/2026 ರಂತೆ ಪ್ರಕರಣ ದಾಖಲಾಗಿತ್ತು.ಈ ಪ್ರಕರಣದ ತನಿಖೆ ನಡೆಸಿದ ಪೊಲೀಸರು, ಆರೋಪಿ ಶಿವಪ್ರಸಾದ್ ಎಂಬಾತ ತನ್ನ ಮನೆಯಲ್ಲಿದ್ದ ಜಾನುವಾರುಗಳನ್ನು ಯಾವುದೇ ಅಗತ್ಯ ದಾಖಲೆಪತ್ರಗಳಿಲ್ಲದೇ ಅಕ್ರಮವಾಗಿ ಮಾರಾಟ ಮಾಡಿರುವುದು ಕಂಡುಬಂದಿದೆ.

ಈ ಹಿನ್ನೆಲೆಯಲ್ಲಿ ನಿಯಮಾನುಸಾರ ಕ್ರಮಕೈಗೊಂಡ ಪೊಲೀಸರು, ಅ 8 ರಂದು ಆರೋಪಿಯ ಮನೆ ಮತ್ತು ಕೊಟ್ಟಿಗೆಯ ಪರಿಸರವನ್ನು ಜಪ್ತಿ ಮಾಡಿದ್ದಾರೆ.
- Advertisement -








