- Advertisement -
- Advertisement -



ಪುತ್ತೂರು: ಪುರುಷರಕಟ್ಟೆ-ಶಾಂತಿಗೋಡು ರಸ್ತೆಯನ್ನು ಕೂಡಲೇ ದುರಸ್ತಿ ನಡೆಸುವಂತೆ ಆಗ್ರಹಿಸಿ ಪುತ್ತಿಲ ಪರಿವಾರದ ಕಾರ್ಯಕರ್ತರು ಮಾಯಂಗಳದಲ್ಲಿ ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಿದ ವೇಳೆ ರಸ್ತೆ ದುರಸ್ಥಿಗೆ ಎರಡು ದಿನಗಳ ಕಾಲಾವಕಾಶ ನೀಡಿದ್ದು, ಈವರೆಗೆ ಯಾವುದೇ ಕಾಮಗಾರಿ ಪ್ರಾರಂಭಗೊಳ್ಳದ ಹಿನ್ನಲೆ ಇಂದು (ಜು.30) ಮತ್ತೆ ಪ್ರತಿಭಟನೆ ನಡೆಸಲಾಗುತ್ತಿದೆ.
ನರಿಮೊಗರು ಗ್ರಾಮ ಪಂಚಾಯತಿ ಕಚೇರಿ ಮುಂಭಾಗ ಪ್ರತಿಭಟನೆ ಪ್ರಾರಂಭಿಸಲಾಗಿದೆ. ಅಹಿತಕರ ಘಟನೆ ನಡೆಯದಂತೆ ಪುತ್ತೂರು ನಗರ ಪೊಲೀಸ್ ಠಾಣೆಯ ವತಿಯಿಂದ ಪೊಲೀಸ್ ಬಂದೋಬಸ್ತು ಏರ್ಪಡಿಸಲಾಗಿದೆ.
ಪುತ್ತಿಲ ಪರಿವಾರದ ಸಂಸ್ಥಾಪಕ ಅರುಣ್ ಪುತ್ತಿಲ, ಅಧ್ಯಕ್ಷ ಶ್ರೀರಾಮ ಪಾತಳ ಸಹಿತ ಪುತ್ತಿಲ ಪರಿವಾರದ ಕಾರ್ಯಕರ್ತರು, ರಿಕ್ಷಾ ಚಾಲಕರು, ಸ್ಥಳೀಯರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದಾರೆ.
- Advertisement -








