ಪುತ್ತೂರು: ಆಟೋ ರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಆಟೋ ಚಾಲಕನ ವಿರುದ್ಧ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪುತ್ತೂರು ಗ್ರಾಮಾಂತರ ಠಾಣಾ ವ್ಯಾಪ್ತಿಯ ನಿವಾಸಿಯಾಗಿರುವ ಸಂತ್ರಸ್ತ ಮಹಿಳೆಯು, ದಿನಾಂಕ 09.09.2026 ರಂದು ಬೆಳಿಗ್ಗೆ ಕೆಲಸದ ನಿಮಿತ್ತ ಮನೆಯಿಂದ ಹೊರಟು, ತನ್ನ ಪರಿಚಯದ ಬಾಲಕೃಷ್ಣ ಎಂಬವರು ಚಾಲಕರಾಗಿರುವ KA21 B2011 ನೋಂದಣಿಯ ಆಟೋ ರಿಕ್ಷಾದಲ್ಲಿ ಪುತ್ತೂರು ಕಡೆಗೆ ತೆರಳುತ್ತಿದ್ದರು.ಈ ವೇಳೆ ಆರೋಪಿ ಆಟೋ ಚಾಲಕನು ಮಾರ್ಗ ಬದಲಿಸಿ, ರಿಕ್ಷಾವನ್ನು ಕುರಿಯ ಎಂಬಲ್ಲಿ ತಂದು ನಿಲ್ಲಿಸಿ, ಸಂತ್ರಸ್ತ ಮಹಿಳೆಯೊಂದಿಗೆ ಅನುಚಿತವಾಗಿ ವರ್ತಿಸಿ ಲೈಂಗಿಕ ಕಿರುಕುಳ ನೀಡಿರುವುದಾಗಿ ಸಂತ್ರಸ್ತ ಮಹಿಳೆ ದೂರು ನೀಡಿದ್ದಾರೆ.
ಸಂತ್ರಸ್ತೆ ನೀಡಿದ ದೂರಿನ ಮೇರೆಗೆ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಅ.ಕ್ರ: 117/2026, ಕಲಂ 74, 75, 64 BNS ಕಾಯ್ದೆಯಡಿ ಪ್ರಕರಣ ದಾಖಲಾಗಿದ್ದು, ಆರೋಪಿ ಬಾಲಕೃಷ್ಣ ರವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.








