Friday, June 5, 2026
spot_imgspot_img
spot_imgspot_img

ಪುತ್ತೂರು: ವಿಶ್ವ ಬಂಟರ ಸಮ್ಮೇಳನದ ಆಮಂತ್ರಣ ಪತ್ರಿಕೆ ಬಿಡುಗಡೆ

- Advertisement -
- Advertisement -

ಪುತ್ತೂರು: ಉಡುಪಿ ಅಜ್ಜರಕಾಡು ಮೈದಾನದಲ್ಲಿ ಅ.28 ಹಾಗೂ 29 ರಂದು ನಡೆಯಲಿರುವ ವಿಶ್ವ ಬಂಟರ ಸಮ್ಮೇಳನದ ಆಮಂತ್ರಣ ಪತ್ರಿಕೆ ಬಿಡುಗಡೆ ಹಾಗೂ ಸಮಾಲೋಚನಾ ಸಭೆ ಕೊಂಬೆಟ್ಟು ಬಂಟರ ಭವನದಲ್ಲಿ ನಡೆಯಿತು.

ತಾಲೂಕು ಬಂಟರ ಸಂಘದ ಆಶ್ರಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ಶಾಸಕ ಅಶೋಕ್ ಕುಮಾರ್ ರೈ ಆಮಂತ್ರಣ ಪತ್ರಿಕೆ ಬಿಡುಗಡೆ ಮಾಡಿ, ವಿಶ್ವ ಬಂಟರ ಸಮ್ಮೇಳನ ಅರ್ಥಪೂರ್ಣವಾಗಿ ನಡೆಯಲಿ ಎಂದು ಶುಭಹಾರೈಸಿದರು.

ಈ ಸಂದರ್ಭ ವೇದಿಕೆಯಲ್ಲಿ ಜಾಗತಿಕ ಬಂಟರ ಸಂಘದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ, ಉಪಾಧ್ಯಕ್ಷ ಕರ್ನಿರೆ ವಿಶ್ವನಾಥ ಶೆಟ್ಟಿ, ಬಂಟರ ಯಾನೆ ನಾಡವರ ಮಾತ್ರ ಸಂಘದ ಉಪಾಧ್ಯಕ್ಷ ಕಾವು ಹೇಮನಾಥ ಶೆಟ್ಟಿ, ವಿಶ್ವ ಬಂಟರ ಸಮ್ಮೇಳನದ ಸಾಂಸ್ಕೃತಿಕ ಕಾರ್ಯದರ್ಶಿ ಚಂದ್ರಹಾಸ ಶೆಟ್ಟಿ, ತಾಲೂಕು ಬಂಟರ ಸಂಘದ ಅಧ್ಯಕ್ಷ ಶಶಿಕುಮಾರ್ ರ ಬಾಲ್ಯೊಟ್ಟು, ಮಾಜಿ ಶಾಸಕರಾದ ಶಕುಂತಳಾ ಟಿ. ಶೆಟ್ಟಿ, ಮಾತೃ ಸಂಘದ ಪುತ್ತೂರು ತಾಲೂಕು ಸಮಿತಿ ಸಂಚಾಲಕ ದಯಾನಂದ ರೈ ಮನವಳಿಕೆಗುತ್ತು, ಮಲ್ಲಿಕಾ ಪ್ರಸಾದ್‌, ಪ್ರಧಾನ ಕಾರ್ಯದರ್ಶಿ ರಮೇಶ್‌ ರೈ ಡಿಂಬ್ರಿ, ಯುವ ಬಂಟರ ಸಂಘದ ಶಶಿಕುಮಾರ್‌ ರೈ ಮುಂಡಾಳಗುತ್ತು, ಮಹಿಳಾ ಬಂಟರ ಸಂಘದ ಅಧ್ಯಕ್ಷೆ ಸಬಿತಾ ಭಂಡಾರಿ, ತಾಲೂಕು ಬಂಟರ ಸಂಘದ ಕೋಶಾಧಿಕಾರಿ ಕೃಷ್ಣಪ್ರಸಾದ್ ಆಳ್ವ ಉಪಸ್ಥಿತರಿದ್ದರು.

- Advertisement -

Related news

error: Content is protected !!