Sunday, June 29, 2025
spot_imgspot_img
spot_imgspot_img

ಆದಾಯಕ್ಕಿಂತ ಅಧಿಕ ಆಸ್ತಿ ಗಳಿಕೆ ಪ್ರಕರಣ; ಪುತ್ತೂರು ಮೂಲದ ತಹಶೀಲ್ದಾರ್‌ ಅಜಿತ್ ಕುಮಾರ್‌ ರೈಗೆ ಷರತ್ತುಬದ್ಧ ಜಾಮೀನು ಮಂಜೂರು

- Advertisement -
- Advertisement -

ಆದಾಯಕ್ಕಿಂತ ಅಧಿಕ ಆಸ್ತಿ ಗಳಿಕೆ ಪ್ರಕರಣದ ಆರೋಪಿಯಾಗಿ ನ್ಯಾಯಾಂಗ ಬಂಧನದಲ್ಲಿರುವ ಕೆ.ಆರ್. ಪುರ ತಾಲ್ಲೂಕಿನ ತಹಶೀಲ್ದಾರ್ ಆಗಿದ್ದ ಅಜಿತ್ ಕುಮಾರ್‌ ರೈ ಅವರಿಗೆ ನಗರದ ನ್ಯಾಯಾಲಯ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.

ಈ ಸಂಬಂಧ ಜಾಮೀನು ಕೋರಿ ಅಜಿತ್ ಕುಮಾರ್ ರೈ ಸಲ್ಲಿಸಿದ್ದ ಅರ್ಜಿಯನ್ನು ಸಿಟಿ ಸಿವಿಲ್ ಸೆಷನ್ಸ್ ನ್ಯಾಯಾಲಯ-23ರ ನ್ಯಾಯಾಧೀಶ ಕೆ.ಎಂ. ರಾಧಾಕೃಷ್ಣ ಸೋಮವಾರ ವಿಚಾರಣೆ ನಡೆಸಿದರು.

ಹೈಕೋರ್ಟ್ ನ ಹಿರಿಯ ವಕೀಲ ಎಂ.ಎಸ್. ಶ್ಯಾಮಸುಂದರ್‌, ಅಜಿತ್ ರೈ ಪರ ವಾದ ಮಂಡಿಸಿದರು. ಅಜಿತ್ ರೈ ಈ ಹಿಂದೆ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಭ್ರಷ್ಟಾಚಾರ ನಿಯಂತ್ರಣ ಕಾಯ್ದೆ ಪ್ರಕರಣಗಳ ವಿಶೇಷ ನ್ಯಾಯಾಲಯ ವಜಾ ಮಾಡಿತ್ತು.

ಲೋಕಾಯುಕ್ತ ಪೊಲೀಸರು 2023ರ ಜೂನ್ 28ರಂದು ಅಜಿತ್ ರೈ ಮನೆ ಮೇಲೆ ದಾಳಿ ಮಾಡಿ ಶೋಧ ಕಾರ್ಯ ನಡೆಸಿದ್ದರು. ವಿಚಾರಣೆಗೆ ಸಹಕರಿಸದ ಆರೋಪದ ಅಡಿಯಲ್ಲಿ ಜೂನ್ 29ರಂದು ಅವರನ್ನು ಬಂಧಿಸಲಾಗಿತ್ತು.

- Advertisement -

Related news

error: Content is protected !!