Wednesday, July 2, 2025
spot_imgspot_img
spot_imgspot_img

ಪುತ್ತೂರು: ವಿಶ್ವ ಹಿಂದೂ ಪರಿಷದ್‌‌ನ ನೂತನ ಜಿಲ್ಲಾ ಕಾರ್ಯಾಲಯದ ಭೂಮಿ ಪೂಜೆ ಕಾರ್ಯಕ್ರಮ

- Advertisement -
- Advertisement -

ಪುತ್ತೂರು: ವಿಶ್ವ ಹಿಂದೂ ಪರಿಷದ್ ನೂತನ ಜಿಲ್ಲಾ ಕಾರ್ಯಾಲಯದ ಭೂಮಿ ಪೂಜಾ ಕಾರ್ಯಕ್ರಮ ಪುತ್ತೂರು ವಿಶ್ವ ಹಿಂದೂ ಪರಿಷದ್ ನಿವೇಶನದಲ್ಲಿ ನಡೆಯಿತು.

ಶ್ರೀ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಸುಬ್ರಹ್ಮಣ್ಯ ನರಸಿಂಹ ಸಂಪುಟದ ಶ್ರೀ ವಿದ್ಯಾಪ್ರಸನ್ನ ಸ್ವಾಮೀಜಿಯವರು ನವರತ್ನ ಮತ್ತು ಅಕ್ಷತೆಯನ್ನು ಸಮರ್ಪಿಸಿ ಕೆಸರು ಕಲ್ಲು ಹಾಕುವ ಮೂಲಕ ನೂತನ ಕಾರ್ಯಾಲಯ ಕಾಮಗಾರಿಗೆ ಚಾಲನೆ ನೀಡಿದರು.

ವಿ.ಹಿಂ.ಪ ದಕ್ಷಿಣ ಪ್ರಾಂತದ ಕಾರ್ಯಾಧ್ಯಕ್ಷ ಎಂ.ಬಿ ಪುರಾಣಿಕ್, ವಿ.ಹಿಂ.ಪ ಕೇಂದ್ರಿಯ ಕಾರ್ಯದರ್ಶಿ ಗೋಪಾಲ್ ಜಿ ಮತ್ತು ಕರ್ನಾಟಕ ದಕ್ಷಿಣ ಪ್ರಾಂತ ಉಪಾಧ್ಯಕ್ಷ ಯು ಪೂವಪ್ಪ ಅವರು ಶ್ರೀಗಳ ಜೊತೆ ಕೆಸರುಕಲ್ಲು ಹಾಕುವಲ್ಲಿ ಜೊತೆ ಸೇರಿದರು. ಕಲ್ಲಾರ ಶ್ರೀ ಗುರು ರಾಘವೇಂದ್ರ ಮಠದ ಅರ್ಚಕ ವೇ ಮೂ ರಾಘವೇಂದ್ರ ಉಡುಪ ಭೂಮಿ ಪೂಜೆ ನೆರವೇರಿಸಿದರು.

ಈ ಕಾರ್ಯಕ್ರಮದಲ್ಲಿ ವಿಹಿಂಪ ಕರ್ನಾಟಕ ಪ್ರಾಂತದ ಕಾರ್ಯದರ್ಶಿ ಜಗನ್ನಾಥ ಶಾಸ್ತ್ರೀ, ರಾಷ್ಟ್ರೀಯ ಸ್ವಯಂಸೇವಕ ಸಂಘಚಾಲಕ್ ವಿನಯಚಂದ್ರ, ವಿ.ಹಿಂ.ಪ ಮಾಜಿ ಅಧ್ಯಕ್ಷ ಸುಬ್ರಹ್ಮಣ್ಯ ಕೊಳತ್ತಾಯ ಸಹಿತ ಹಲವಾರು ಮಂದಿ ಗಣ್ಯರು ಉಪಸ್ಥಿತರಿದ್ದರು.

- Advertisement -

Related news

error: Content is protected !!